ದುಬೈ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವಿಪ್ ಗೆ ಕಾರಣಕರ್ತರಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೊಸ ಪಟ್ಟಿಯನ್ನು ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾದ ಫಿಂಚ್ ರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸತತ 90, 59 ಹಾಗೂ 50 ರನ್ ಗಳನ್ನು ಗಳಿಸಿ 47 ಅಂಕಗಳನ್ನು ಪಡೆದು ಮೊದಲ ಸ್ಥಾನಕ್ಕೇರಿದ್ದಾರೆ.