ಸಾಕ್ಷಿ ಮಲಿಕ್ 
ಕ್ರೀಡೆ

ಪಾಕ್ ಆಟಗಾರರ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಿದ ಸಾಕ್ಷಿ ಮಲಿಕ್

ಭಾರತ ಮತ್ತು ಪಾಕಿಸ್ತಾನ ಮಧ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕ್ ಕಲಾವಿದರನ್ನು ಮತ್ತು ಆಟಗಾರರನ್ನು ನಿಷೇಧಿಸಬೇಕು...

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ಮಧ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕ್ ಕಲಾವಿದರನ್ನು ಮತ್ತು ಆಟಗಾರರನ್ನು ನಿಷೇಧಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಆಟಗಾರನಿಗೆ ವಿಶ್ವದ ಯಾವುದೇ ಮೂಲೆಯಲ್ಲೂ ಸ್ಪರ್ಧಿಸುವ ಹಕ್ಕು ಇದೆ ಎಂದಿದ್ದಾರೆ.
ವಿವಿಧ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಪಾಕಿಸ್ತಾನಿ ಆಟಗಾರರಿಗೆ ಆಹ್ವಾನ ನೀಡಬೇಕು ಎಂದು ತಾವು ಹೇಳಿರುವುದಾಗಿ 
ಇಂದು ಬೆಳಗ್ಗೆಯಿಂದ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ ಆ ರೀತಿ ಯಾವುದೇ ಹೇಳಿಕೆ ನಾನು ನೀಡಿಲ್ಲ ಸಾಕ್ಷಿ ವರದಿಗಾರರಿಗೆ ತಿಳಿಸಿದ್ದಾರೆ.
ಉರಿ ಉಗ್ರ ದಾಳಿಯ ನಂತರ ಭಾರತದಲ್ಲಿ ನಡೆಯುವ ಕ್ರೀಡೆಗಳಲ್ಲಿ ಭಾಗವಹಿಸದಂತೆ ಪಾಕಿಸ್ತಾನಿ ಆಟಗಾರರಿಗೆ ತಡೆಯಲಾಗುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಾಕ್ಷಿ, ವಿಶ್ವದ ಯಾವುದೇ ಸ್ಥಳದಲ್ಲೂ ಸ್ಪರ್ಧಿಸುವ ಹಕ್ಕು ಆಟಗಾರನಿಗೆ ಇದೆ ಎಂದು ಮಾತ್ರ ನಾನು ಹೇಳಬಲ್ಲೆ ಎಂದರು. ಆದರೆ ಪಾಕಿಸ್ತಾನಿ ಆಟಗಾರರಿಗೆ ಭಾರತದಲ್ಲಿ ಆಡಲು ಅವಕಾಶ ನೀಡಿ ಅಂತ ನಾನು ಹೇಳಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT