ಸುಶೀಲ್ ಕುಮಾರ್ 
ಕ್ರೀಡೆ

ಪದ್ಮಭೂಷಣ ಪ್ರಶಸ್ತಿಗೆ ಕುಸ್ತಿಪಟು ಸುಶೀಲ್ ಹೆಸರು ಶಿಫಾರಸು

ಒಲಿಂಪಿಕ್ಸ್ ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ) ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು...

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ) ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಿದೆ. 
ಸುಶೀಲ್ ಕುಮಾರ್ ಜತೆಗೆ ಡಬ್ಲ್ಯುಎಫ್ಐ ರೆಸ್ಲರ್ ಅಲ್ಕಾ ತೋಮರ್, ದ್ರೋಣಾಚಾರ್ಯ ವಿಜೇತ ಹಾಗೂ ಸುಶೀಲ್ ಕೋಚ್ ಯಶ್ವಿರ್ ಸಿಂಗ್ ಹೆಸರನ್ನೂ ಶಿಫಾರಸು ಮಾಡಿದೆ. ಈ ಮೂವರ ಹೆಸರನ್ನು ಕಳೆದ ತಿಂಗಳೇ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ಡಬ್ಲ್ಯುಎಫ್ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ತಿಳಿಸಿದ್ದಾರೆ. 
ಸುಶೀಲ್ ಕುಮಾರ್ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು ಮತ್ತು ಲಂಡನ್ ಒಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದಿದ್ದರು. ಈ ಅಪ್ರತಿಮ ಸಾಧನೆಗಾಗಿ ಡಬ್ಲ್ಯುಎಫ್ಐ ಹಿಂದೊಮ್ಮೆ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಆದರೆ ಆಗ ತಿರಸ್ಕತಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT