ಕ್ರೀಡೆ

ಪ್ಯಾರಾಲಿಂಪಿಕ್ಸ್ ಶಾಟ್‌ಪುಟ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ದೀಪಾ ಮಲಿಕ್

Vishwanath S
ರಿಯೋ ಡಿ ಜನೈರೋ: ರಿಯೋ ಪ್ಯಾರಾಲಿಂಪಿಕ್ಸ್ ನ ಮಹಿಳೆಯರ ಶಾಟ್‌ಪುಟ್‌ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಭಾರತದ ದೀಪಾ ಮಲಿಕ್ ಇತಿಹಾಸ ನಿರ್ಮಿಸಿದ್ದಾರೆ. 
45 ವರ್ಷದ ದೀಪಾ ಮಲಿಕ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಶಾಟ್‌ಪುಟ್‌ ಅಲ್ಲದೆ, ಜಾವೆಲಿನ್ ಥ್ರೋ, ಈಜು ಸ್ಪರ್ಧೆಗಳಲ್ಲಿಯೂ ದೀಪಾ ಮಲಿಕ್ ಸ್ಪರ್ಧಿಸಿದ್ದರು. 2011ರ ವಿಶ್ವ ಚಾಂಪಿಯನ್ ಶಿಪ್ ಶಾಟ್ ಪಟ್ ಮತ್ತು ಡಿಸ್ಕಸ್ ಥ್ರೋನಲ್ಲಿ ಅವರು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. 
SCROLL FOR NEXT