ರವಿಚಂದ್ರನ್ ಅಶ್ವಿನ್ 
ಕ್ರೀಡೆ

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪ್ರದರ್ಶನ ಬಗ್ಗೆ ಪಾಕ್ ವ್ಯಕ್ತಿ ಟೀಕೆ, ತಿರುಗೇಟು ನೀಡಿದ ಅಶ್ವಿನ್

ರಿಯೋ ಒಲಿಂಪಿಕ್ಸ್ ಕುಸ್ತಿಯಲ್ಲಿ ಪದಕ ಗೆದ್ದಿದ್ದ ಸಾಕ್ಷಿ ಮಲಿಕ್ ರ ಪ್ರದರ್ಶನ ಬಗ್ಗೆ ಟೀಕಿಸಿ, ಟೀಕೆಗೆ ಗುರಿಯಾಗಿದ್ದ ಪಾಕ್ ಪತ್ರಕರ್ತ ಓಮರ್ ಕುರೇಶಿಯಿಂದ ಪ್ರೇರಿತನಾದ...

ನವದೆಹಲಿ: ರಿಯೋ ಒಲಿಂಪಿಕ್ಸ್ ಕುಸ್ತಿಯಲ್ಲಿ ಪದಕ ಗೆದ್ದಿದ್ದ ಸಾಕ್ಷಿ ಮಲಿಕ್ ರ ಪ್ರದರ್ಶನ ಬಗ್ಗೆ ಟೀಕಿಸಿ, ಟೀಕೆಗೆ ಗುರಿಯಾಗಿದ್ದ ಪಾಕ್ ಪತ್ರಕರ್ತ ಓಮರ್ ಕುರೇಶಿಯಿಂದ ಪ್ರೇರಿತನಾದ @mufc_affanf9(ಅಫನ್) ಎಂಬಾತ 120 ಕೋಟಿ ಜನಸಂಖ್ಯೆ ಹೊಂದಿರುವ ಭಾರತೀಯರಿಗೆ ಪ್ಯಾರಾಲಿಂಪಿಕ್ಸ್ ನಲ್ಲಿ ಬರೀ 4 ಪದಕ ಬಂದಿರುವುದು ನಾಚಿಕೆಗೀಡು ಎಂದು ಟ್ವೀಟಿಸಿದ್ದು ಇದಕ್ಕೆ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಕಟುವಾಗಿ ಉತ್ತರಿಸಿದ್ದಾರೆ.

ಭಾರತೀಯ ಕ್ರೀಡಾಪಟುಗಳನ್ನು ಟೀಕಿಸಿ ಟ್ವೀಟ್ ಮಾಡಿದ್ದ ಅಫನ್ ಗೆ ಪ್ರತಿಕ್ರಿಯಿಸಿರುವ ಆರ್ ಅಶ್ವಿನ್ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ನಿಮ್ಮ ರಾಷ್ಟ್ರ(ಪಾಕಿಸ್ತಾನ)6ನೇ ಸ್ಥಾನದಲ್ಲಿದೆ. ಆದರೂ ಪ್ಯಾರಾಲಿಂಪಿಕ್ಸ್ ನಲ್ಲಿ ಕೇವಲ 1 ಪದಕ ಗೆದ್ದಿದ್ದು ಎರಡನೇ ಪದಕ ಗೆಲ್ಲಲ್ಲಿ ಎಂದು ಸವಾಲು ಹಾಕಿದ್ದಾರೆ. ಇನ್ನು ರಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಪಾಕ್ ಪರ ಸ್ಪರ್ಧಿಸಿದ್ದ ಹೈದರ್ ಅಲಿ ಎಂಬಾತ ಲಾಂಗ್ ಜಂಪ್ ನಲ್ಲಿ ಕಂಚಿನ ಪದಕ ಗೆದ್ದು ಪಾಕಿಸ್ತಾನಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾನೆ.

ರಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟ ಸಾಕ್ಷಿ ಮಲಿಕ್ ಪ್ರದರ್ಶನದ ಬಗ್ಗೆ ಇಡೀ ದೇಶವೇ ಹೆಮ್ಮೆಯಿಂದ ಖುಷಿ ಪಡುತ್ತಿದ್ದಾಗ ಪಾಕಿಸ್ತಾನ ಪತ್ರಕರ್ತ ಓಮರ್ ಕುರೇಶಿ ಭಾರತ ಗೆದ್ದಿರುವುದು ಒಂದು ಕಂಚಿನ ಪದಕವಾದರೂ 20 ಚಿನ್ನ ಪದಕ ಗೆದ್ದಂತೆ ಬಿಂಬಿಸಲಾಗುತ್ತಿದೆ ಎಂದು ಟೀಕಿಸಿದ್ದ ಅದಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್ ಪ್ರತ್ಯುತ್ತರ ನೀಡಿದ್ದು, ಪದಕದ ಖಾತೆ ತೆರೆದು ಹೊಸ ಉತ್ಸಾಹ ಮೂಡಿಸಿರುವ ಸಾಕ್ಷಿ ಮಲಿಕ್ ಕಂಚಿನ ಪದಕ ಗೆದ್ದಿರುವುದು ನಮಗೆ 20 ಚಿನ್ನದ ಪದಕ ಗೆದ್ದಷ್ಟೆ ಹರ್ಷವಾಗಿದೆ ಎಂದು ರೀಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು