ಸೈಕಲಿಸ್ಟ್ 
ಕ್ರೀಡೆ

ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್‌‌ನಲ್ಲಿ ಇರಾನಿನ ಸೈಕಲಿಸ್ಟ್ ಸಾವು

ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್ ನಲ್ಲಿ ಇರಾನಿಯ ಸೈಕಲಿಸ್ಟ್ ಮೃತಪಟ್ಟಿದ್ದಾರೆ...

ರಿಯೋ ಡಿ ಜನೈರೋ: ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್ ನಲ್ಲಿ ಇರಾನಿಯ ಸೈಕಲಿಸ್ಟ್ ಮೃತಪಟ್ಟಿದ್ದಾರೆ. 
ಸ್ಥಳೀಯ ಕಾಲಮಾನ ಪ್ರಕಾರ ಶನಿವಾರ ಬೆಳಗ್ಗೆ 10.40ರ ಸುಮಾರಿಗೆ ಸೈಕಲ್ ರೇಸ್ ನಡೆಯುತ್ತಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 48 ವರ್ಷದ ಸೈಕಲಿಸ್ಟ್ ಬಮನ್ ಗೊಲ್ಬರ್ನೆಝಾದ್ ಅವರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಅಪಘಾತಕ್ಕೂಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದ ಬಮನ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪ್ಯಾರಾಲಿಂಪಿಕ್ಸ್ ಸಮಿತಿ(ಐಪಿಸಿ) ಹೇಳಿದೆ. 
ಪ್ಯಾರಾಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲಿ ಸಂಭವಿಸಿದ ಮೊದಲ ಸಾವು ಇದಾಗಿದೆ. ಬಮನ್ ಅವರ ಅಪಘಾತಕ್ಕೀಡಾಗಿದ್ದಾರೆ ಎಂಬ ಖಚಿತ ಮಾಹಿತಿ ಇಲ್ಲ. ಹೀಗಾಗಿ ತನಿಖೆ ನಡೆಸಲಾಗುತ್ತದೆ ಎಂದು ಐಪಿಸಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!