ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿಕೆಗೆ ಪಾಕ್ ಮಾಜಿ ಕ್ರಿಕೆಟಿಗರ ಅಪಹಾಸ್ಯ!
ಉರಿ ಸೇನಾ ಶಿಬಿರದ ಮೇಲಿನ ಉಗ್ರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿದ್ದು ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಪಾಕ್...
ಕರಾಚಿ: ಉರಿ ಸೇನಾ ಶಿಬಿರದ ಮೇಲಿನ ಉಗ್ರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿದ್ದು ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಪಾಕ್ ನೊಂದಿಗೆ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ ಎಂದಿದ್ದು ಇದಕ್ಕೆ ಪಾಕಿಸ್ತಾನ ಮಾಜಿ ಕ್ರಿಕೆಟಿಗರು ಅಪಹಾಸ್ಯ ಮಾಡಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಪಂದ್ಯಗಳೇ ನಡೆದಿಲ್ಲ ಹೀಗಿರುವಾಗ ಪಾಕ್ ನೊಂದಿಗೆ ಆಡುವುದಿಲ್ಲ ಎಂಬ ಹೇಳಿಕೆ ಹಾಸ್ಯಭರಿತವಾಗಿದೆ ಎಂದು ಮಾಜಿ ಪಾಕ್ ನಾಯಕ ಮುಹಮ್ಮದ್ ಯೂಸುಫ್ ಹೇಳಿದ್ದಾರೆ.
ಅನುರಾಗ್ ಠಾಕೂರ್ ಹೇಳಿಕೆ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಮಾಜಿ ಕ್ರಿಕೆಟಿಗರು ಮಾತ್ರ ಬಾಯಿ ಬಡಿದುಕೊಳ್ಳುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.