ಕ್ರೀಡೆ

ಪಿವಿ ಸಿಂಧು ಈಗ ವಿಶ್ವದ ನಂಬರ್ 2 ಬ್ಯಾಡ್ಮಿಂಟನ್ ತಾರೆ

Lingaraj Badiger
ನವದೆಹಲಿ: 2016 ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರು ವಿಶ್ವ ಮಹಿಳಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. 
ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ ಇಂದು ವಿಶ್ವ ಶ್ರೇಯಾಂಕಿತರ ಪಟ್ಟಿ ಬಿಡುಗಡೆ ಮಾಡಿದ್ದು, ಐದನೇ ಸ್ಥಾನದಲ್ಲಿದ್ದ ಪಿವಿ ಸಿಂಧು ಎರಡನೇ ಸ್ಥಾನಕ್ಕೆ ಜಿಗಿದಿದ್ದು, ಇದು ಅವರ ವೃತ್ತಿ ಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ.
ಪಿವಿ ಸಿಂಧು ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಅಲ್ಲದೆ ಇತ್ತೀಚಿಗಷ್ಟೆ ನಡೆದ ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪೈನ್ ನ ಕರೋಲಿನ್ ಮರಿನ್ ವಿರುದ್ಧ ಭರ್ಜರಿ ಜಯ ಗಳಿಸಿ ಟ್ರೋಫಿ ತಮ್ಮದಾಗಿಸಿಕೊಂಡಿದ್ದರು.
SCROLL FOR NEXT