ಸೈನಾ ನೆಹ್ವಾಲ್ 
ಕ್ರೀಡೆ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಸೆಮೀಸ್ ಸೋತ ಸೈನಾಗೆ ಕಂಚಿನ ಪದಕ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಜಪಾನಿನ ನೊಜೊಮಿ ಓಕುಹಾರ ವಿರುದ್ಧ ಸೋಲು....

ಗ್ಲಾಸ್ಗೋ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಜಪಾನಿನ ನೊಜೊಮಿ ಓಕುಹಾರ ವಿರುದ್ಧ ಸೋಲು ಅನುಭವಿಸಿದ  ಸೈನಾ ನೆಹ್ವಾಲ್ ಅವರು ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸ್ಕಾಟ್ಲಾಂಡ್ ನ ಕ್ರಿಸ್ಟಿ ಗಿಲ್ಮೌರ್ ವಿರುದ್ಧ 21-19, 18-21, 21-15 ಅಂತರದಿಂದ ಜಯ ಗಳಿಸಿ ಸೆಮಿಫೈನಲ್ ತಲುಪಿದ್ದರು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಜಪಾನಿನ ಏಳನೇ ಶ್ರೇಯಾಂಕಿತ ಆಟಗಾರ್ತಿ ಓಕುಹಾರ ಅವರ ವಿರುದ್ಧ 12-21, 21-17, 21-10 ಸೆಟ್ ಗಳ ಅಂತರದಿಂದ ಸೈನಾ ಸೋಲು ಅನುಭವಿಸಿ ನಿರಾಸೆ ಮೂಡಿಸಿದರು.
ಇನ್ನು ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ 4ನೇ ಶ್ರೇಯಾಂಕಿತೆ ಪಿವಿ ಸಿಂಧು ಸಹ ಚೀನಾದ ಸನ್ ಯು ವಿರುದ್ಧ 21-14, 21-9 ನೇರ ಸೆಟ್ ಗಳಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಜಗತ್ತಿನ 10ನೇ ಶ್ರೇಯಾಂಕಿತೆ ಚೀನಾದ ಚೇನ್ ಯೂಫಿ ವಿರುದ್ಧ ಸೆಣೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT