ಲಂಡನ್: ಸ್ವಿಜರ್ಲೆಂಡ್ ನ ಟೆನಿಸ್ ಆಟಗಾರ ರೋಜರ್ ಫೆಡರರ್ 8ನೇ ಬಾರಿಗೆ ಪ್ರತಿಷ್ಠಿತ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರೋಜರ್ ಫೆಡರರ್ ಕ್ರೊವೇಶಿಯಾದ ಮರಿನ್ ಸಿಲಿಕ್ ರನ್ನು 6-3, 6-1, 6-4, ನೇರ ಸೆಟ್ ಗಳ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.
ಈ ಜಯದೊಂದಿಗೆ ಒಟ್ಟಾರೆ 19 ಗ್ರ್ಯಾಂಡ್ ಸ್ಲ್ಯಾಮ್ಸ್ ಗೆದ್ದ ಕೀರ್ತಿಗೆ ಭಾಜನರಾಗಿದ್ದಾರೆ. ಇನ್ನು 8ನೇ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ಅತೀ ಹೆಚ್ಚು ಬಾರಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.