ವಿಂಬಲ್ಡನ್ ಟೂರ್ನಿ ಆರಂಭಕ್ಕೂ ಮುನ್ನ ಶರಪೋವಾ ಔಟ್: ಅಭಿಮಾನಿಗಳಿಗೆ ನಿರಾಸೆ
ಖ್ಯಾತ ಟೆನ್ನಿಸ್ ತಾರೆ ಮರಿಯಾ ಶರಪೋವಾ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ತೊಡೆಯ ಗಾಯದಿಂದ ಚೇತರಿಸಿಕೊಳ್ಳದ ಶರಪೋವಾ ವಿಂಬಲ್ಡನ್ ..
ಲಂಡನ್: ಖ್ಯಾತ ಟೆನ್ನಿಸ್ ತಾರೆ ಮರಿಯಾ ಶರಪೋವಾ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ತೊಡೆಯ ಗಾಯದಿಂದ ಚೇತರಿಸಿಕೊಳ್ಳದ ಶರಪೋವಾ ವಿಂಬಲ್ಡನ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.
2004 ರಲ್ಲಿ ಆಲ್ ಇಂಗ್ಲೆಂಡ್ ಕ್ಲಬ್ ನಲ್ಲಿ ಚಾಂಪಿಯನ್ ಆಗಿದ್ದ 30 ವರ್ಷದ ರಷ್ಯಾ ಆಟಗಾರ್ತಿ ಈ ಬಾರಿ ಪ್ರಧಾನ ಸುತ್ತಿನಲ್ಲಿ ಆಡುವ ಮುನ್ನ ಅರ್ಹತಾ ಸುತ್ತಿನಲ್ಲಿ ಆಡಬೇಕಿತ್ತು.
ತೊಡೆ ಗಾಯ ಸಂಪೂರ್ಣವಾಗಿ ಗುಣಮುಖ ವಾಗದಿರುವುದು ಸ್ಕ್ಯಾನ್ ನಿಂದಾಗಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶರಪೋವಾ ಹೇಳಿಕೆ ನೀಡಿದ್ದಾರೆ.
ಜುಲೈ 31 ರಿಂದ ಸ್ಟ್ಯಾಂಡ್ ಪೋರ್ಡ್ ನಲ್ಲಿ ಆರಂಭವಾಗುವ ಟೂರ್ನಮೆಂಟ್ ನಲ್ಲಿ ಭಾಗವಹಿಸುವುದಾಗಿ ಅವರು ಹೇಳಿದ್ದಾರೆ. ಡೋಪಿಂಗ್ ನಿಷೇಧದ ಅವಧಿ ಮುಗಿದ ಬಳಿಕ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್ ಆರಂಭವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.