ಪಿ.ವಿ.ಸಿಂಧು 
ಕ್ರೀಡೆ

ಇಂಡಿಯಾ ಓಪನ್: ಸಂಗ್ ಜಿ ಹ್ಯೂನ್ ಮಣಿಸಿದ ಪಿವಿ ಸಿಂಧು ಫೈನಲ್ ಗೆ

ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವಿವಿ ಸಿಂಧು ದೆಹಲಿಯಲ್ಲಿ ನಡೆದ ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ...

ನವದೆಹಲಿ: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವಿವಿ ಸಿಂಧು ದೆಹಲಿಯಲ್ಲಿ ನಡೆದ ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಶನಿವಾರ ದಕ್ಷಿಣ ಕೊರಿಯಾದ ಸಂಗ್ ಜಿ ಹ್ಯೂನ್ ವಿರುದ್ಧ ಜಯ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.
ಸುಮಾರು 1 ಗಂಟೆ 16 ನಿಮಿಷಗಳ ಕಾಲ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು,  ಸಂಗ್ ಜಿ ಹ್ಯೂನ್  ವಿರುದ್ಧ 21-18, 14-21, 21 -14 ನೇರ ಸೆಟ್ ಗಳ ಅಂತರದಿಂದ ಮಣಿಸಿದರು. ಈ ಮೂಲಕ ಟೂರ್ನಿ ಫೈನಲ್ ಹಂತಕ್ಕೆ ಪಿವಿ ಸಿಂಧು ಪ್ರವೇಶ ಪಡೆದಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸ್ಪೇನ್ ನ ಕ್ಯಾರೊಲಿನ್ ಮರಿನ್ ಅವರನ್ನು ಎದುರಿಸಲಿದ್ದಾರೆ.
ಪಿ.ವಿ.ಸಿಂಧು ನಿನ್ನೆ ನಡೆದ ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಭಾರತದ ಮತ್ತೋರ್ವ ಸ್ಟಾರ್ ಷಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಜಯ ಗಳಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ರಾಜ್ಯದಲ್ಲಿ coldrif ಸಿರಪ್ ಸರಬರಾಜು ಆಗಿಲ್ಲ: ಕೆಲವು ಕೆಮ್ಮಿನ ಔಷಧಿಗಳ ಮೇಲೆ ನಿಗಾ ಇಡಲು ಸೂಚನೆ; ದಿನೇಶ್ ಗುಂಡೂರಾವ್

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video Viral

ಮೈದಾನದಲ್ಲೇ ಹೈಡ್ರಾಮಾ: ರನೌಟ್ ಆಗಿ ಕ್ರೀಸ್ ತೊರೆಯದ ಪಾಕ್ ಬ್ಯಾಟರ್ Muneeba Ali, ಬಲವಂತವಾಗಿ ಹೊರಗಟ್ಟಿದ ಅಂಪೈರ್ ಗಳು, ಆಗಿದ್ದೇನು?

SCROLL FOR NEXT