ಸಂಗ್ರಹ ಚಿತ್ರ 
ಕ್ರೀಡೆ

ಆರ್ಚರಿ ವಿಶ್ವಕಪ್‌: ಪುರುಷರ ಕಾಂಪೌಂಡ್‌ ವಿಭಾಗದಲ್ಲಿ ಭಾರತಕ್ಕೆ ಚಿನ್ನ!

ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಪುರುಷರ ತಂಡ ಕಾಂಪೌಂಡ್‌ ವಿಭಾಗದಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.

ಶಾಂಘೈ: ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಪುರುಷರ ತಂಡ ಕಾಂಪೌಂಡ್‌ ವಿಭಾಗದಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.

ಶನಿವಾರ ಕೊಲಂಬಿಯಾ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 226-221 ಅಂಕಗಳ ಅಂತರದಲ್ಲಿ ರೋಚಕ ಜಯ ದಾಖಲಿಸಿದ್ದು, ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಭಾರತದ ಪುರುಷರ ತಂಡವನ್ನು ಅಭಿಷೇಕ್‌ ವರ್ಮಾ, ಚಿನ್ನರಾಜು  ಶ್ರೀಧರ್‌, ಅಮನ್‌ಜಿತ್ ಸಿಂಗ್‌ ಪ್ರತಿನಿಧಿಸಿದ್ದರು.

ಇದಕ್ಕೂ ಮೊದಲು ಸೆಮಿಫೈನಲ್ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಿದ್ದ ಭಾರತ ತಂಡ 232-230 ಅಂಕಗಳ ರೋಚಕ ಜಯ ದಾಖಲಿಸಿತ್ತು. ಅದೇ ಹುಮ್ಮಸ್ಸಿನಲ್ಲಿ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಭಾರತೀಯ  ಕ್ರೀಡಾಪಟುಗಳು ಕೊಲಂಬಿಯಾ ವಿರುದ್ಧ ತೀವ್ರ ಜಿದ್ದಾಜಿದ್ದಿನಿಂದ  ಹೋರಾಡಿ 226-221 ಅಂಕಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಇನ್ನು ಕೊಲಂಬಿಯಾ ತಂಡದಲ್ಲಿ ಕಾಮಿಲೊ ಆಂಡ್ರೆಸ್ ಕರ್ಡೋನಾ, ಜೋಸ್ ಕಾರ್ಲೊಸ್  ಒಸ್ಪಿನಾ ಮತ್ತು ಡ್ಯಾನಿಯಲ್ ಮುನೋಜ್ ಇದ್ದರು.

ಮಹಿಳೆಯರ ವಿಭಾಗದ ಪಂದ್ಯದಲ್ಲಿ ಕೊರಿಯಾ, ಡೆನ್ಮಾರ್ಕ್ ಮತ್ತು ರಷ್ಯಾ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!