ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರನ್ನು ಮಣಿಸುವ ಮೂಲಕ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಮೂರನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ನಾಗಪುರದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ವಿಶ್ವದ 11ನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಪಿವಿ ಸಿಂಧು ವಿರುದ್ಧ 21-17, 27-25 ನೇರ ಸೆಟ್ ಗಳಿಂದ ಜಯ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.