ಸುಶೀಲ್ ಕುಮಾರ್ 
ಕ್ರೀಡೆ

ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ ಮಲಿಕ್, ಸುಶೀಲ್ ಕುಮಾರ್ ಗೆ ಚಿನ್ನದ ಪದಕ

014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್.......

ಇಂದೋರ್: 2014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ  ಚಾಂಪಿಯನ್ ಶಿಪ್ ಪುರುಷರ 74 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಸುಶೀಲ್ ಕುಮಾರ್ ಒಟ್ಟು ಎರಡು ನಿಮಿಷ ಮತ್ತು 33 ಸೆಕೆಂಡುಗಳ ಕಾಲ ಹೋರಾಟ ನಡೆಸಿ ಅಂತಿಮ ಸುತ್ತಿನಲ್ಲಿ ಜಯಶಾಲಿಗಳದರು.ಮೂರು ವರ್ಷಗಳ ಬಳಿಕ ಸುಶೀಲ್ ರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.
ಇದೇ ವೇಳೆ ಭಾರತದ ಏಕೈಕ ಮಹಿಳಾ ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಸಾಕ್ಷಿ ಮಲಿಕ್ ಮತ್ತು ಇನ್ನೋರ್ವ ಕುಸ್ತಿ ಪಟುವಾದ ಗೀತಾ ಫೋಗಟ್ ಅವರು ಕ್ರಮವಾಗಿ 62 ಕೆಜಿ ಮತ್ತು 59 ಕೆಜಿ ವಿಭಾಗಗಳಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ
ಮಧ್ಯಪ್ರದೇಶ ಕುಸ್ತಿ ಅಸೋಸಿಯೇಷನ್ ಆಯೋಜಿಸಿದ್ದ 62ನೇ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್ ನ.15ರಿಂದ ಮೂರು ದಿನಗಳ ಕಾಲ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!