ನವದೆಹಲಿ: ಅಮೆರಿಕದ ಅನಹೀಮ್ ನಲ್ಲಿ ನಡೆಯುತ್ತಿರುವ ವಿಶ್ವ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮೀರಾಬಾಯಿ ಚಾನು ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.
ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಚಾನು ಅವರು 48 ಕೆಜಿ ತೂಕದ ಮಹಿಳಾ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟಾರೆ 194 ಕೆಜಿ ತೂಕ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟರು.
ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಕರ್ಣಂ ಮಲ್ಲೇಶ್ವರಿ ಸಹ 1994 ಮತ್ತು 1995ರಲ್ಲಿ ಎರಡು ಬಾರಿ ಚಿನ್ನ ಗೆದ್ದ ಸಾಧನೆ ಮಾಡಿದ್ದರು.