ಎಚ್ ಎಸ್ ಪ್ರಣೋಯ್ 
ಕ್ರೀಡೆ

ಫ್ರೆಂಚ್ ಓಪನ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪ್ರಣೋಯ್, ಸಿಂಧು, ಶ್ರೀಕಾಂತ್

ಭಾರತದ ಬ್ಯಾಡ್ಮಿಂಟನ್ ಆಟಗಾರ ಎಚ್ ಎಸ್ ಪ್ರಣೋಯ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಡೆನ್ಮಾರ್ಕ್ ಆಟಗಾರನನ್ನು ಸೋಲಿಸಿ ಕ್ವಾರ್ಟರ್...

ಪ್ಯಾರಿಸ್: ಭಾರತದ ಬ್ಯಾಡ್ಮಿಂಟನ್ ಆಟಗಾರ ಎಚ್ ಎಸ್ ಪ್ರಣೋಯ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಡೆನ್ಮಾರ್ಕ್ ಆಟಗಾರನನ್ನು ಸೋಲಿಸಿ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದ್ದಾರೆ. 
ಡೆನ್ಮಾರ್ಕ್ ಬ್ಯಾಡ್ಮಿಂಟನ್ ಆಟಗಾರ ಹ್ಯಾನ್ಸ್-ಕ್ರಿಸ್ಟಿನ್ ವಿಟಿಂಗ್ಹಸ್ ವಿರುದ್ಧ ಪ್ರಣೋಯ್ 21-11, 21-12 ನೇರ ಸೆಟ್ ಗಳಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 
ಇನ್ನು 2016ರ ಆಸ್ಟ್ರೇಲಿಯಾನ್ ಓಪನ್ ಚಾಂಪಿಯನ್ ಕೊರಿಯಾದ ಜೆಯಾನ್ ಹೈಯೊಕ್-ಜಿನ್ ವಿರುದ್ಧ ಮುಂದಿನ ಪಂದ್ಯದಲ್ಲಿ ಪ್ರಣೋಯ್ ಸೆಣೆಸಲಿದ್ದಾರೆ. 
ಇದೇ ವೇಳೆ ಭಾರತ ಸ್ಟಾರ್ ಆಟಗಾರ್ತಿ ಪಿವಿ ಸಿಂಧು, ಶ್ರೀಕಾಂತ್ ಸಹ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ನೂತನವಾಗಿ ಬಿಡುಗಡೆಯಾಗಿರುವ ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್ ನಲ್ಲಿ ಶ್ರೀಕಾಂತ್ 4ನೇ ಸ್ಥಾನಕ್ಕೇರಿದ್ದಾರೆ. ಎಚ್ ಎಸ್ ಪ್ರಣಯ್ 12ನೇ ಹಾಗೂ ಸಮೀರ್ ವರ್ಮಾ 18ನೇ ಸ್ಥಾನ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ