ಶೂಟರ್ ಹೀನಾ ಸಿಧುಗೆ ಚಿನ್ನದ ಗರಿ 
ಕ್ರೀಡೆ

ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್: ಶೂಟರ್ ಹೀನಾ ಸಿಧುಗೆ ಚಿನ್ನದ ಗರಿ!

ಭಾರತದ ಯುವ ಶೂಟರ್ ಹೀನಾ ಸಿಧು ಮಂಗಳವಾರ ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಬ್ರಿಸ್ಬೇನ್: ಭಾರತದ ಯುವ ಶೂಟರ್ ಹೀನಾ ಸಿಧು ಮಂಗಳವಾರ ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಹೀನಾ ಸಿಧು ಒಟ್ಟು 248.08 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಫೈನಲ್  ನಲ್ಲಿ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಪಂದ್ಯದಲ್ಲಿ ಹೀನಾ ಚಿನ್ನದ ಪದಕ ಗಳಿಸಿದ್ದಾರೆ. ಇನ್ನು ಹೀನಾಗೆ ಆಸ್ಟ್ರೇಲಿಯಾದ ಶೂಟರ್ ಎಲೆನಾ ಗಾಲಿಯಾಬೊವಿಚ್ ಅವರು ತೀವ್ರ ಪೈಪೋಟಿ ನೀಡಿದರಾದರೂ 238.2  ಅಂಕಗಳನ್ನಷ್ಟೇ ಗಳಿಸಲು ಶಕ್ತರಾದರು. ಆ ಮೂಲಕ ಹೀನಾ ಗಿಂತ ಸುಮಾರು 10 ಅಂಕಗಳ ಅಂತರದಲ್ಲಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟು ಬೆಳ್ಳಿ ಪದಕ ಪಡೆದರು.
ಮತ್ತೋರ್ವ ಆಸ್ಟ್ರೇಲಿಯಾದ ಆಟಗಾರ್ತಿ ಕ್ರಿಸ್ಟಿ ಗಿಲ್ಮನ್ ಅವರು ಒಟ್ಟು 213 ಅಂಕಗಳನ್ನು ಗಳಿಸುವ ಮೂಲಕ ಕಂಚಿನ ಪದಕಕ್ಕೆ ತೃಪ್ಚಿ ಪಟ್ಟುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT