ಬೆಳ್ಳಿಗೆದ್ದ ಪ್ರದೀಪ್ ಕುಮಾರ್ 
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿನ ಭಾರತದ ವೇಟ್ ಲಿಫ್ಟರ್ ಗಳ ಯಶೋಗಾಥೆ ಮುಂದುವರೆದಿದ್ದು, ಸೋಮವಾರ ಪುರುಷರ ವೇಟ್ ಲಿಫ್ಟಿಂಗ್ ವಿಭಾಗದ ಸ್ಪರ್ಧೆಯಲ್ಲಿ ಪರ್ದೀಪ್ ಸಿಂಗ್ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

ಗೋಲ್ಡ್ ಕೋಸ್ಟ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿನ ಭಾರತದ ವೇಟ್ ಲಿಫ್ಟರ್ ಗಳ ಯಶೋಗಾಥೆ ಮುಂದುವರೆದಿದ್ದು, ಸೋಮವಾರ ಪುರುಷರ ವೇಟ್ ಲಿಫ್ಟಿಂಗ್ ವಿಭಾಗದ ಸ್ಪರ್ಧೆಯಲ್ಲಿ ಪರ್ದೀಪ್ ಸಿಂಗ್ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.
ಪುರುಷರ 105 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ್ದೀಪ್ ಸಿಂಗ್ 2ನೇ ಸ್ಥಾನಗಳಿಸುವ ಮೂಲಕ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟಿದ್ದಾರೆ. 
ಗೋಲ್ಡ್ ಕೋಸ್ಚ್ ಕರ್ರಾರ ಅರೇನಾದಲ್ಲಿ ನಡೆದ ಪುರುಷರ 105 ಕೆಜಿ ವಿಭಾಗದ ಸ್ಪರ್ಧೆಯಲ್ಲಿ 22 ವರ್ಷದ ಪರ್ದೀಪ್ ಸಿಂಗ್, 152 ಮತ್ತು 200 ಕೆಜಿ ಸೇರಿದಂತೆ ಒಟ್ಟು 352 ಕೆಜಿ ತೂಕ ಎತ್ತುವ ಮೂಲಕ ಎರಡನೇ ಸ್ಥಾನ ಪಡೆದರು. ಸಮೋವಾದ ಸನೆಲೆ ಮಾವೋ 360 ಕೆಜಿ ತೂಕ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾದರು. 
ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಇದು 13ನೇ ಪದಕವಾಗಿದ್ದು, ಇದಕ್ಕೂ ಮೊದಲು ಭಾರತದ ವೇಟ್ ಲಿಫ್ಟರ್ ಗಳು 5 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel