ಭಾರತದ ಅಂಕುರ್ ಮಿತ್ತಲ್ 
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು!

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಪುರುಷರ ಡಬಲ್ ಟ್ರಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಂಕುರ್ ಮಿತ್ತಲ್ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಪುರುಷರ ಡಬಲ್ ಟ್ರಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಂಕುರ್ ಮಿತ್ತಲ್ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.
ಬೆಲ್ಮಾಟ್ ಶೂಟಿಂಗ್ ಸೆಂಟರ್ ನಲ್ಲಿ ಇಂದು ನಡೆದ ಪುರುಷರ ಡಬಲ್ ಟ್ರಾಪ್ ಶೂಟಿಂಗ್ ನ ಅಂತಿಮ ಸ್ಪರ್ಧೆಯಲ್ಲಿ ಭಾರತದ ಅಂಕುರ್ ಮಿತ್ತಲ್ ಒಟ್ಟು 133 ಅಂಕಗಳನ್ನು ಸಂಪಾದಿಸುವ ಮೂಲಕ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕ ಗಳಿಸಿದರು. ಇಂದಿನ ಸ್ಪರ್ಧೆಗಳಲ್ಲಿ ಭಾರತಕ್ಕೆ ಇದು ಎರಡನೇ ಕಂಚಿನ ಪದಕವಾಗಿದ್ದು, ಶೂಟಿಂಗ್ ನಲ್ಲಿ ಓಂ ಮಿಥರ್ವಾಲ್ ಅವರು ಭಾರತಕ್ಕೆ ಕಂಚಿನ ಪದಕ ಗಳಿಸಿದ್ದರು. 
ಅಂತೆಯೇ ಇದೇ ಡಬಲ್ ಟ್ರಾಪ್ ಶೂಟಿಂಗ್ ನ ಮಹಿಳೆಯರ ವಿಭಾಗದಲ್ಲಿ ಭಾರತದ ಶ್ರೇಯಸಿ ಸಿಂಗ್ ಚಿನ್ನದ ಪದಕ ಗಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT