ಅಶ್ವಿನಿ ಪೊನ್ನಪ್ಪ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್‌ ನಲ್ಲಿ ಅಶ್ವಿನಿ ಪೊನ್ನಪ್ಪ- ಎನ್‌.ಸಿಕ್ಕಿ ರೆಡ್ಡಿ ಜೋಡಿಗೆ ಕಂಚು

21ನೇ ಕಾಮನ್ವೆಲ್ತ್‌ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಡಬಲ್ಸ್ ನಲ್ಲಿ ಕರ್ನಾಟಕದ...

ಗೋಲ್ಡ್‌ ಕೋಸ್ಟ್‌: 21ನೇ ಕಾಮನ್ವೆಲ್ತ್‌ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಡಬಲ್ಸ್ ನಲ್ಲಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ ಅವರು ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕ್ಯಾರರಾ ಕ್ರೀಡಾ ಸಂಕೀರ್ಣದಲ್ಲಿ ಇಂದು ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್ ಸಿಕ್ಕಿ ರೆಡ್ಡಿ ಅವರು ಆಸ್ಟ್ರೇಲಿಯಾದ ಸೆಟಯಾನಾ ಮಾಪಾಸಾ ಮತ್ತು ಗ್ರೊನಿಯಾ ಸೊಮೆರ್ವಿಲ್ಲೆ ಅವರ ವಿರುದ್ಧ 21-19, 21-19 ನೇರ ಸೆಟ್ ಗಳಿಂದ ಸೋಲಿಸುವ ಮೂಲಕ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದಾರೆ. 
ನಿನ್ನೆ ನಡೆದ ಮಹಿಳೆಯರ ಡಬಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ ಪೈಪೋಟಿಯಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ 21–11, 21–13ರಿಂದ ಶ್ರೀಲಂಕಾದ ಹಸಿನಿ ಅಂಬಲಾಂಗೊಡಗೆ ಮತ್ತು ಮಧುಶಿಕಾ ದಿಲ್ರುಕ್ಷಿ ಅವರನ್ನು ಸೋಲಿಸಿದ್ದರು.
ಇನ್ನು ಪುರುಷರ ಡಬಲ್ಸ್ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸನಿಲ್ ಶಂಕರರ್ ಶೆಟ್ಟಿ ಅವರು ಸಹ ಕಂಚಿನ ಪದಕ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel