ಏಷ್ಯನ್ ಗೇಮ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: 4 ಚಿನ್ನ, 3 ಬೆಳ್ಳಿ, 8 ಕಂಚಿನ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳು
ಏಷ್ಯನ್ ಗೇಮ್ಸ್ 2018 ರಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 15 ಪದಕಗಳನ್ನು ಗೆದ್ದಿದೆ.
ಜಕಾರ್ತಾ ಏಷ್ಯನ್ ಗೇಮ್ಸ್ 2018 ರಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 15 ಪದಕಗಳನ್ನು ಗೆದ್ದಿದೆ.
ಶೂಟರ್ ರಾಹಿ ಚಿನ್ನದ ಪದಕ ಹಾಗೂ ವೂಶೂ ಕ್ರೀಡಾ ಪಟುಗಳು ನಾಲ್ಕು ಕಂಚಿನ ಪದಕ ಗೆದ್ದಿದ್ದು, ಒಟ್ಟಾರೆ 4 ಚಿನ್ನದ ಪದಕ, 3 ಬೆಳ್ಳಿ ಪದಕ, ಹಾಗೂ 8 ಕಂಚಿನ ಪದಕ ಸೇರಿದಂತೆ ಆ.22 ರಂದು ಭಾರತ ತನ್ನ ಮುಡಿಗೇರಿಸಿಕೊಂಡ ಒಟ್ಟು ಪದಕಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ಪಂದ್ಯದಲ್ಲಿ ಮಹಿಳೆಯರ 25 ಮಿ ಪಿಸ್ತೂಲ್ ವಿಭಾಗದಲ್ಲಿ ರಾಹಿ ಸರ್ನೊಬಾತ್ ಚಿನ್ನದ ಪದಕ ಗಳಿಸಿಕೊಂಡಿದ್ದು ಏಷ್ಯಾನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.