ಜಕಾರ್ತ: 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ನಲ್ಲಿ ಬೆಳ್ಳಿ ತಾರೆ ಎಂದೇ ಖ್ಯಾತರಾಗಿರುವ ಪಿವಿ ಸಿಂಧು ಅವರು ಫೈನಲ್ ಪ್ರವೇಶಿಸಿದ್ದಾರೆ.
ಜಕಾರ್ತದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕಿತೆ ಜಪಾನ್ ಮೂಲದ ಅಕನೇ ಯಮಗುಚಿ ಅವರನ್ನು ಪಿವಿ ಸಿಂಧು 21-17, 15-21, 21-10 ಸೆಟ್ ಗಳಿಂದ ಗೆಲುವು ಸಾಧಿಸಿ ಫೈನಲ್ ಗೆ ಪ್ರವೇಶಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ವಿಶ್ವದ ಅಗ್ರ ಶ್ರೇಯಾಂಕಿತೆ ಚೀನಾದ ತೈಪೆಯ ತೈ ಝ ಯಿಂಗ್ ಜೊತೆ ಚಿನ್ನದ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ.
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದು ಬೆಳ್ಳಿ ಪದಕವಂತೂ ಖಚಿತವಾಗಿದೆ. ಕಾರಣ ಈ ಹಿಂದೆ ಹಲವು ಟೂರ್ನಿಗಳಲ್ಲಿ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದು ಫೈನಲ್ ಪಂದ್ಯದಲ್ಲಿ ಚಿನ್ನ ಗೆಲ್ಲುವಲ್ಲಿ ಹಲವು ಬಾರಿ ಸಿಂಧು ಎಡವಿದ್ದಾರೆ. ಈ ಅಪಖ್ಯಾತಿಯನ್ನು ಈ ಬಾರಿಯಾದರೂ ದೂರ ಸರಿಸಿ ಭಾರತಕ್ಕೆ ಚಿನ್ನದ ಪದಕ ಗೆಲ್ಲಿಸಿಕೊಡುತ್ತಾರೆ ಎಂದು ಕಾದು ನೋಡುಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics