ನೀರಜ್ ಚೋಪ್ರ 
ಕ್ರೀಡೆ

ಏಷ್ಯನ್ ಗೇಮ್ಸ್: ಜಾವಲಿನ್ ಥ್ರೋದಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನ!

ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ ಜಾವೆಲಿನ್ ಥ್ರೊದಲ್ಲಿ ಭಾರತದ ನೀರಜ್ ಚೋಪ್ರ ಐತಿಹಾಸಿಕ ಚಿನ್ನದ ಪದಕ ಗಳಿಸಿದ್ದಾರೆ.

ಜಕಾರ್ತಾ: ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ ಜಾವೆಲಿನ್ ಥ್ರೊದಲ್ಲಿ ಭಾರತದ ನೀರಜ್ ಚೋಪ್ರ ಐತಿಹಾಸಿಕ ಚಿನ್ನದ ಪದಕ ಗಳಿಸಿದ್ದಾರೆ.
ಮೊದಲ ಎಸೆತದಲ್ಲಿ  83.46 ಅಂಕ ಗಳಿಸಿದ್ದ  ಚೋಪ್ರಾ ಮೂರನೇ ಎಸೆತದಲ್ಲಿ 88.06 ಅಂಕದೊಂದಿಗೆ  ಚಿನ್ನಕ್ಕೆ ಗುರಿ ಇಟ್ಟರು.
ಚೀನಾದ ಕಿಝೆನ್ ಲಿಯು 82.22 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ ಪಾಕಿಸ್ತಾನದ ಅರ್ಷದ್ ನದೀಮ್ ಕಂಚಿನ ಪದಕ ಗಳಿಸಿಕೊಂಡಿದ್ದಾರೆ.
ಏಷಿಯನ್ ಗೇಮ್ಸ್ ಇತಿಹಾಸದಲ್ಲಿ ಜಾವೆಲಿನ್ ಥ್ರೊದ ವಿಭಾಗದಲ್ಲಿ ಇದು ಭಾರತಕ್ಕೆ ಸಂದ ಪ್ರಥಮ ಚಿನ್ನದ ಪದಕವಾಗಿದೆ.
ಪ್ರಸಕ್ತ ಸಾಲಿನಲ್ಲಿ ಶಾಟ್ ಪೂಟ್ ನಲ್ಲಿ ತಾಜಿಂದರ್ ಸಿಂಗ್ ಚಿನ್ನ ಗಳಿಸಿದ ಬಳಿಕ ಅಥ್ಲೆಟಿಕ್ಸ್ ನಲ್ಲಿ ಇದು ಭಾರತದ ಪಾಲಿನ ಎರಡನೇ ಚಿನ್ನದ ಪದಕವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!