ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2018: ಭಾರತದ ಬ್ಯಾಡ್ಮಿಂಟನ್ ಗೆ ಕಿಡಂಬಿ ಶ್ರೀಕಾಂತ್, ಪಿವಿ ಸಿಂಧು ಸಾರಥ್ಯ

Lingaraj Badiger

ನವದೆಹಲಿ: ಪುರುಷರ ಸಿಂಗಲ್ಸ್ ನಲ್ಲಿ ಭಾರತದ ನಂಬರ್ 1 ಆಟಗಾರರ ಕಿಡಂಬಿ ಶ್ರೀಕಾಂತ್ ಮತ್ತು ಒಲಿಂಪಿಕ್ ಪದಕ ವಿಜೇತೆ ಪಿ ವಿ ಸಿಂಧು ಅವರು ಏಪ್ರಿಲ್ 4ರಿಂದ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭಗೊಳ್ಳಲಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಸಾರಥ್ಯ ವಹಿಸಿಕೊಂಡಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ, ಸೈನಾ ನೆಹ್ವಾಲ್‌ ಹಾಗೂ ಪಿ.ವಿ ಸಿಂಧು ಭಾರತ ತಂಡವನ್ನುಮುನ್ನಡೆಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸಿಂಧು ಮತ್ತು ಸೈನಾ ಪದಕತಂದುಕೊಡುವ ವಿಶ್ವಾಸ ಹೊಂದಿದ್ದಾರೆ.

ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಿಡಂಬಿ ಶ್ರೀಕಾಂತ್ಪ್ರಮುಖ ಭರವಸೆ ಎನಿಸಿದ್ದಾರೆ. ಎಚ್‌.ಎಸ್‌. ಪ್ರಣಯ್ ಕೂಡಕಣದಲ್ಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದಲ್ಲಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ಮಿಶ್ರ ಡಬಲ್ಸ್‌ನಲ್ಲಿ ಪ್ರಣವ್ ಜೆರಿ ಚೋಪ್ರಾ ಮತ್ತುಸಿಕ್ಕಿ ರೆಡ್ಡಿ ಆಡಲಿದ್ದಾರೆ. ಮಹಿಳೆಯರ ಡಬಲ್ಸ್‌ನಲ್ಲಿ ಸಿಕ್ಕಿ ರೆಡ್ಡಿಮತ್ತು ಅಶ್ವಿನಿ ಪೊನ್ನಪ್ಪ ಪದಕದ ಭರವಸೆ ಹೊಂದಿದ್ದಾರೆ.

SCROLL FOR NEXT