ಜಪಾನ್ ತಂಡವನ್ನು 4-2 ಗೋಲುಗಳ ಅಂತರಿಂದ ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತ ಪುರುಷರ ತಂಡದ ಚಿತ್ರ 
ಕ್ರೀಡೆ

ನಾಲ್ಕು ಆಹ್ವಾನಿತ ರಾಷ್ಟ್ರಗಳ ಹಾಕಿ ಪಂದ್ಯಾವಳಿ:ಭಾರತ ಫೈನಲ್ ಗೆ ಲಗ್ಗೆ

ನಾಲ್ಕು ಆಹ್ವಾನಿತ ರಾಷ್ಟ್ರಗಳ ಹಾಕಿ ಪಂದ್ಯಾವಳಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಜಪಾನ್ ತಂಡವನ್ನು 4-2 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.

ಹ್ಯಾಮಿಲ್ಟನ್  :ಇಲ್ಲಿ ನಡೆಯುತ್ತಿರುವ ನಾಲ್ಕು ಆಹ್ವಾನಿತ ರಾಷ್ಟ್ರಗಳ  ಹಾಕಿ ಪಂದ್ಯಾವಳಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಜಪಾನ್  ತಂಡವನ್ನು 4-2 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.

ಈ ಹಿಂದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು 3-2, ಬೆಲ್ಜಿಯಂ ತಂಡವನ್ನು 5-4 ಗೋಲುಗಳಿಂದ ಅಂತರದಿಂದ ಸೋಲಿಸಿದ ಭಾರತ, ಮನ್ ದೀಪ್ ಸಿಂಗ್ ಹಾಗೂ ರಮಣ್ ದೀಪ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಫೈನಲ್ ಪ್ರವೇಶಿಸಿತು.

ಮನ್ ದೀಪ್ ಸಿಂಗ್ ಹಾಗೂ ರಮಣ್ ದೀಪ್ ಸಿಂಗ್  ಅವರು 58 ನೇ ನಿಮಿಷದಲ್ಲಿ ಎರಡು ಗೋಲುಗಳನ್ನು ಸಿಡಿಸಿದರು. ಇದಕ್ಕೂ ಮುನ್ನ 12 ನಿಮಿಷದಲ್ಲಿ ವಿವೇಕ್ ಸಾಗರ್ ಪ್ರಸಾದ್  ಹಾಗೂ  30 ನೇ ನಿಮಿಷದಲ್ಲಿ ವರುಣ್ ಕುಮಾರ್  ಅವರು ಭಾರತಕ್ಕೆ ಎರಡು ಗೋಲು ತಂದುಕೊಟ್ಟಿದ್ದರು.

ನಾಳೆ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡ ವಿಶ್ವ ಕ್ರಮಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಬೆಲ್ಜಿಯಂ ತಂಡವನ್ನು ಎದುರಿಸಲಿದೆ.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!