ಭಾರತ ಫುಟ್ಬಾಲ್ ತಂಡ 
ಕ್ರೀಡೆ

'ಅಸಮರ್ಥ' ಎಂದ ಐಒಎ: ಏಷ್ಯನ್ ಗೇಮ್ಸ್ 2018ರಲ್ಲಿ ಪಾಲ್ಗೊಳ್ಳದಿರಲು ಭಾರತ ಫುಟ್ಬಾಲ್ ತಂಡಗಳ ನಿರ್ಧಾರ

ಭಾರತ ಫುಟ್ಬಾಲ್ ತಂಡ ಕೇವಲ ಸ್ಪರ್ಧೆಗಾಗಿ ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದು, ಪದಕ ಗೆಲ್ಲುವುದಕ್ಕಾಗಿ ಅಲ್ಲ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಹೇಳಿದ್ದು...

ನವದೆಹಲಿ: ಭಾರತ ಫುಟ್ಬಾಲ್ ತಂಡ ಕೇವಲ ಸ್ಪರ್ಧೆಗಾಗಿ ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದು, ಪದಕ ಗೆಲ್ಲುವುದಕ್ಕಾಗಿ ಅಲ್ಲ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಹೇಳಿದ್ದು ಈ ಹಿನ್ನೆಲೆಯಲ್ಲಿ 2018ರ ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳದಿರಲು ಭಾರತ ಫುಟ್ಬಾಲ್ ತಂಡಗಳು ನಿರ್ಧರಿಸಿವೆ. 
ಐಒಎನ ಈ ಹೇಳಿಕೆಯಿಂದ 2019ರಲ್ಲಿ ನಡೆಯಲಿರುವ ಏಷ್ಯಾ ಕಪ್ ಫುಟ್ಬಾಲ್ ಟೂರ್ನಿಯ ಪೂರ್ವ ತಯಾರಿಗಾಗಿ ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳಲು ಸಿದ್ಥತೆ ನಡೆಸುತ್ತಿದ್ದ ಭಾರತೀಯ ಫುಟ್ಬಾಲ್ ತಂಡಕ್ಕೆ ಈ ನಿರ್ಧಾರ ತೃಪ್ತಿ ತಂದಿಲ್ಲ. 
ಭಾರತ ಪುರುಷ ಮತ್ತು ಮಹಿಳಾ ಫುಟ್ಬಾಲ್ ತಂಡ ಈ ಎರಡರಲ್ಲಿ ಯಾವ ತಂಡ ಅಸಮರ್ಥ ಎಂದು ಐಒಎ ಸ್ಪಷ್ಟನೆ ನೀಡದೆ ಇರುವುದು ಗೊಂದಲಕ್ಕೆ ಕಾರಣವಾಗಿದೆ. 
ಭಾರತ ತಂಡ ಇತ್ತೀಚಿನ ದಿನಗಳಲ್ಲಿ ಫಿಫಾ ಶ್ರೇಯಾಂಕದಲ್ಲಿ ಉತ್ತಮ ನಿರ್ವಹಣೆ ತೋರಿದೆ. 173ನೇ ಶ್ರೇಯಾಂಕದಿಂದ 97ನೇ ಶ್ರೇಯಾಂಕವನ್ನು ಪಡೆದಿದೆ. ಜತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ. ಫುಟ್ಬಾಲ್ ಬೆಳೆಯಬೇಕಾದ ಹಂತದಲ್ಲಿರುವಾಗ ಐಒಎನ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದು ಟೀಕೆಗೆ ಕಾರಣವಾಗಿದೆ. 
ತಂಡ ವಿಭಾಗದಲ್ಲಿ ಅಗ್ರ 8 ಶ್ರೇಯಾಂಕ ಹೊಂದಿರುವ ತಂಡಗಳಿಗೆ ಮಾತ್ರ ಏಷ್ಯನ್ ಗೇಮ್ಸ್ ಗೆ ಅರ್ಹತೆ ಎಂದು ಐಒಎ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮದಿಂದಾಗಿ ಬಾರತ ಫುಟ್ಬಾಲ್ ತಂಡಕ್ಕೆ ಭಾಗವಹಿಸಲು ಸಾಧ್ಯವಾಗುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT