ಸೈನಾ ನೆಹ್ವಾಲ್‌ 
ಕ್ರೀಡೆ

ಮಲೇಷ್ಯಾ ಓಪನ್‌ ನಿಂದ ಹೊರಬಿದ್ದ ಸೈನಾ ನೆಹ್ವಾಲ್‌

ಭಾರತದ ಒಲಿಂಪಿಕ್‌ ಪದಕ ವಿಜೇತೆ ಸೈನಾ ನೆಹ್ವಾಲ್‌ ಅವರು ಜಪಾನ್ ನ ಅಕಾನೆ ಯಮಗುಚಿ ವಿರುದ್ಧ ಸೋಲುವ....

ಕೌಲಾಲಂಪುರ: ಭಾರತದ ಒಲಿಂಪಿಕ್‌ ಪದಕ ವಿಜೇತೆ ಸೈನಾ ನೆಹ್ವಾಲ್‌ ಅವರು ಜಪಾನ್ ನ ಅಕಾನೆ ಯಮಗುಚಿ ವಿರುದ್ಧ ಸೋಲುವ ಮೂಲಕ ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಿಂದ ಗುರುವಾರ ಹೊರಬಿದ್ದಿದ್ದಾರೆ.
ಇಂದು ಅಕ್ಸಿಯಾಟಾ ಅರೆನಾದಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಪ್ರಿ-ಕ್ವಾಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕಿತ ಆಟಗಾರ್ತಿ ಯಮಗುಚಿ ವಿರುದ್ಧ ಸೈನಾ 15-21, 13-21 ನೇರ ಗೇಮ್ ಗಳಿಂದ ಸೋಲು ಅನುಭವಿಸಿದರು.
ಜಪಾನ್ ನ ಅಕಾನೆ ಯಮಗುಚಿ ವಿರುದ್ಧ ಸೈನಾಳ ಆರನೇ ಸೋಲು ಇದಾಗಿದೆ. ಸೈನಾ, ಯಮಗುಚಿಯೊಂದಿಗೆ ಒಟ್ಟು ಏಳು ಬಾರಿ ಮುಖಾಮುಖಿಯಾಗಿದ್ದು, ಕೇವಲ ಒಂದು ಬಾರಿ 2014ರಲ್ಲಿ ಚೀನಾ ಓಪನ್ ನಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ.
ಕಳೆದ ಮಂಗಳವಾರ ನಡೆದ ಮೊದಲ ಸುತ್ತಿನಲ್ಲಿ ಸೈನಾ 21-12, 21-16 ನೇರ ಗೇಮ್‌ಗಳಿಂದ ಹಾಂಕಾಂಗ್‌ನ ಯಿಪ್‌ ಪುಯ್‌ ಯಿನ್‌ ವಿರುದ್ಧ ಸುಲಭ ಜಯ ಗಳಿಸಿದರು.
ಏಳು ಲಕ್ಷ ಅಮೆರಿಕನ್ ಡಾಲರ್ ಪ್ರಶಸ್ತಿ ಮೊತ್ತ ಹೊಂದಿರುವ ಟೂರ್ನಿಯಲ್ಲಿ ಸೈನಾ ತಮ್ಮ ಅನುಭವದ ಪ್ರಯೋಜನ ಪಡೆಯಲು ಸಾಧ್ಯವಾಗಲಿಲ್ಲ. ಇದರೊಂದಿಗೆ 36 ನಿಮಿಷದಲ್ಲೇ ಸುಲಭ ಸೋಲಿಗೆ ತುತ್ತಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT