ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚು 
ಕ್ರೀಡೆ

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚು

ಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.

ಬೆಶ್ ಕೆಕ್(ಕಿರ್ಗಿಸ್ಥಾನ): ಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗಳಿಸಿದ ಮೊದಲ ಭಾರತೀಯ ಮಹಿಳೆ ಎನ್ನುವ ಕೀರ್ತಿಗೆ ನವಜೋತ್ ಕೌರ್ ಪಾತ್ರರಾಗಿದ್ದಾರೆ.
ಮಹಿಳೆಯರ 65 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ನಡೆದ ಅಂತಿಮ ಸುತ್ತಿನ ಹೋರಾಟದಲ್ಲಿ ಕೌರ್ ಜಪಾನ್‌ನ ಮಿಯಾ ಇಮಾಯ್ ಅವರನ್ನು 9-1ರ ಅಂತರದಿಂದ ಪರಾಭವಗೊಳಿಸಿದರು.
ಸಾಕ್ಷಿ ಮಲಿಕ್ ಗೆ ಕಂಚು
ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತದ ಇನ್ನೋರ್ವ ಕುಸ್ತಿ ಪಟು ಸಾಕ್ಷಿ ಮಲಿಕ್  62 ಕೆ.ಜಿ ಫ್ರಿಸ್ಟೈಲ್ ವಿಭಾಗದಲ್ಲಿ ನಡೆದ ಪಂದ್ಯದಲ್ಲಿ ಕಜಕಿಸ್ತಾನದ ಅಯ್ಯುಲಿಯಮ್ ಕ್ಯಾಸಿಮೊವಾ ವಿರುದ್ಧ 10-7ರ ಅಂತರದಲ್ಲಿ ಜಯಿಸಿ ಕಂಚಿನ ಪದಕ ಗೆದ್ದಿದ್ದಾರೆ.
ಇದೇ ಕ್ರೀಡಾಕೂಟದಲ್ಲಿ ನಿನ್ನೆ ನಡೆದ ಹೋರಾಟದಲ್ಲಿ ಭಾರತದ ವಿನೇಶ್ ಪೋಗಟ್ ಬೆಳ್ಳಿ ಪದಕ ಗಳಿಸಿದ್ದರು. ಹೀಗೆ ಇದುವರೆವಿಗೆ ಭಾರತವು ಕೂಟದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ, ನಾಲ್ಕು ಕಂಚಿನ ಪದಕಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್