ಸುಲ್ತಾನ್‌ ಅಜ್ಲಾನ್‌ ಶಾ ಕಪ್‌ ಹಾಕಿ: ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಿದ ಭಾರತ 
ಕ್ರೀಡೆ

ಸುಲ್ತಾನ್‌ ಅಜ್ಲಾನ್‌ ಶಾ ಕಪ್‌ ಹಾಕಿ: ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಿದ ಭಾರತ

ಮಲೇಷಿಯಾದಲ್ಲಿ ನಡೆಯುತ್ತಿರುವ ಸುಲ್ತಾನ್‌ ಅಜ್ಲಾನ್‌ ಶಾ ಕಪ್‌ ಹಾಕಿ ಸರಣಿಯಲ್ಲಿ ಭಾರತ ಇಂದು ತನ್ನ ಎರಡನೇ ಪಂದ್ಯವನ್ನಾಡಿತ್ತು.

ಇಫೋ(ಮಲೇಷಿಯಾ) : ಮಲೇಷಿಯಾದಲ್ಲಿ ನಡೆಯುತ್ತಿರುವ ಸುಲ್ತಾನ್‌ ಅಜ್ಲಾನ್‌ ಶಾ ಕಪ್‌ ಹಾಕಿ ಸರಣಿಯಲ್ಲಿ ಭಾರತ ಇಂದು ತನ್ನ ಎರಡನೇ ಪಂದ್ಯವನ್ನಾಡಿತ್ತು. ಇಂಗ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಬಾರತ 1-1ರ ಗೋಲುಗಳ ಅಂತರದ ಡ್ರಾ ಸಾಧಿಸಿದೆ.
ಭಾರತದ ಪರ ಶೀಲಾನಂದ್ ಲಾಕ್ರಾ ಪಂದ್ಯದ 14ನೇ ನಿಮಿಷದಲ್ಲಿ  ಗೋಲು ದಾಖಲಿಸಿದ್ದು ತಂಡಕ್ಕೆ ಮುನ್ನಡೆ ಒದಗಿಸಿಕೊಟ್ಟರು. ಆದರೆ ಆ ಬಳಿಕ ಒಟ್ಟು ಒಂಭತ್ತು ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕರೂ ನಮ್ಮವರು ಗೋಲು ಗಳಿಸುವಲ್ಲಿ ವಿಫಲರಾದರು.
ಆದರೆ ಪಂದ್ಯದ ಅಂತಿಮ ಕ್ವಾರ್ಟರ್ ನಲ್ಲಿ ಇಂಗ್ಲೆಂಡಿನ ಮಾರ್ಕ್ ಗ್ಲೆಗ್‌ಹಾರ್ನ್ಗೋಲು ಗಳಿಸಿಕೊಳ್ಳುವುದರೊಡನೆ ಎದುರಾಳಿ ತಂಡ ಸಮಬಲ ಸಾಧಿಸಲು ನೆರವಾದರು.
ಈ ಮೂಲಕ ಪಂದ್ಯವು ಡ್ರಾ ಆಗಿದ್ದು ಕ್ರೀಡಾಕೂಟದಲ್ಲಿ ಭಾರತ ಒಂದು ಅಂಕದೊಡನೆ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. ಇದಕ್ಕೂ ಹಿಂದಿನ ಪಂದ್ಯದಲ್ಲಿ ಭಾರತವು ವಿಶ್ವದ 2ನೇ ರಾರ‍ಯಂಕಿನ ಅರ್ಜೆಂಟೀನಾ ವಿರುದ್ಧ  2-3 ಗೋಲ್‌ ಗಳಿಂದ ಪರಾಭವ ಅನುಭವಿಸಿತ್ತು.
ಇನ್ನು ಭಾರತವು ತನ್ನ ಮೂರನೇ ಪಂದ್ಯದಲ್ಲಿ ವಿಶ್ವದ ಪ್ರಬಲ ತಂಡವಾದ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT