ಸಂದೀಪ್ ಚೌಧರಿ 
ಕ್ರೀಡೆ

ಏಷ್ಯನ್ ಪ್ಯಾರಾ ಕ್ರೀಡಾಕೂಟ: ಜಾವಲಿನ್ ಥ್ರೋನಲ್ಲಿ ಸಂದೀಪ್ ಚೌಧರಿಗೆ ಚಿನ್ನ!

ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಮೂರನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತದ ಸಂದೀಪ್ ಚೌಧರಿ ಚಿನ್ನದ ಪದಕ ಗಳಿಸಿದ್ದಾರೆ.

ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಮೂರನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತದ ಸಂದೀಪ್ ಚೌಧರಿ ಚಿನ್ನದ ಪದಕ ಗಳಿಸಿದ್ದಾರೆ. ಪ್ರಸಕ್ತ ಸಾಲಿನ ಕ್ರೀಡಾಕೂಟದಲ್ಲಿ ಇದು ಭಾರತ ಪರ ಬಂದಿರುವ ಪ್ರಥಮ ಚಿನ್ನದ ಪದಕವಾಗಿದ್ದು ಸಂದೀಪ್ ಜಾವಲಿನ್ ಥ್ರೋ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.
ಪುರುಷರ  F42-44 / 61-64 ವಿಬಾಗದಲ್ಲಿ ಸಂದೀಪ್ ಚೌಧರಿ 60.01 ಮೀಟರ್ ದೂರಕ್ಕೆ ಜಾವಲಿನ್ ಎಸೆಯುವ ಮೂಲಕ ಚಿನ್ನದ ಸಾಧನೆ ಮಾಡಿದ್ದಾರೆ. ಇಏ ವಿಭಾಗದಲ್ಲಿ ಶ್ರೀಲಂಕಾ ಆಟಗಾರ ಬೆಳ್ಳಿ ಪದಕ ಗಳಿಸಿದರೆ ಇರಾನ್ ನ ಸ್ಪರ್ಧಿ ಕಂಚಿನ ಪದಕ ಗಳಿಸಿದ್ದಾರೆ.
ನಿನ್ನೆ (ಭಾನುವಾರ) ಭಾರತ ಎರಡು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ್ದಿತ್ತು.
49 ಕೆ.ಜಿ ಪುರುಷರ ಶವರ್ ಲಿಫ್ಟಿಂಗ್ ಪಂದ್ಯಾವಳಿಯಲ್ಲಿ, ಫರ್ಮನ್ ಬಾಷಾ  ಬೆಳ್ಳಿಯನ್ನು ಮತ್ತು ಪರಮೀತ್ ಕುಮಾರ್ ಕಂಚಿನ ಪದಕ ಗೆದ್ದುಕೊಂಡರು.
ಈಜು ವಿಭಾಗದಲ್ಲಿ ದೇವಂಶಿ ಸತಿಜವಾನ್,  ಸುಯಾಶ್ ಜಾಧವ್ ಕಂಚಿನ ಪದಕವನ್ನು ಗೆದ್ದುಕೊಂಡರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT