ಸೂರಜ್ ಪನ್ವಾರ್ 
ಕ್ರೀಡೆ

ಯೂತ್ ಒಲಿಂಪಿಕ್ಸ್: 5,000 ಮೀ ರೇಸ್ ವಾಕ್ ನಲ್ಲಿ ಸೂರಜ್ ಪನ್ವಾರ್ ಗೆ ಬೆಳ್ಳಿ!

ಅರ್ಜೆಂಟೈನಾದ ಬ್ಯೂರಿಸ್ ಐರಿಸ್ ನಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ಯೂತ್ ಒಲಂಪಿಕ್ಸ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತದ ಸೂರಜ್ ಪನ್ವಾರ್....

ಬ್ಯೂರಿಸ್ ಐರಿಸ್: ಅರ್ಜೆಂಟೈನಾದ ಬ್ಯೂರಿಸ್ ಐರಿಸ್ ನಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ಯೂತ್ ಒಲಂಪಿಕ್ಸ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತದ ಸೂರಜ್ ಪನ್ವಾರ್ ಬೆಳ್ಳಿ ಪದಕ ಗಳಿಸಿದ್ದಾರೆ. ಇದು ಭಾರತದ ಪಾಲಿಗೆ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ವಿಭಾಗದ ಮೊದಲ ಪದಕವಾಗಿದೆ.
5,000 ಮೀ ರೇಸ್ ವಾಕ್ ನಲ್ಲಿ ಸೂರಜ್ ಪದಕದ ಸಾಧನೆ ಮಾಡಿದ್ದು ಎರಡು ಹಂತಗಳಲ್ಲಿ 20.35.87 ಮತ್ತು 20.23.30 ಸಮಯದಲ್ಲಿ ಅವರು ಗುರಿ ಮುಟ್ಟಿದ್ದಾರೆ.
ಎರಡೂ ಹಂತಗಳಲ್ಲಿ ದ್ವಿತೀಯ ಸ್ಥಾನ ಪಡೆಇದ್ದ ಸೂರಜ್ ಇದೇ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ ಈಕ್ವೆಡಾರ್ ನ ಸ್ಪರ್ಧಿ ಅಸ್ಕರ್ ಪಾಟಿನ್ ಅವರಿಗಿಂತ ಏಳು ನಿಮಿಷ ಕಾಲ ಹಿಂದುಳಿದಿದ್ದರು.ಪೋರ್ಟೋರಿಕೋ ಸ್ಪರ್ಧಿ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
ಐಎಎಎಫ್ ಗೆ ನೀಡಿದ ಸಂದರ್ಶನದಲ್ಲಿ ಸೂರಜ್ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ತರಬೇತಿ ಹೊಂದಿ ಪದಕ ಗಳಿಸುವುದು ನನ್ನ ಮುಂದಿನ ಗುರಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT