ಫೈನಲ್ ನಲ್ಲಿ ಮುಗ್ಗರಿಸಿದ ಭಾರತದ ಸೈನಾ ನೆಹ್ವಾಲ್ 
ಕ್ರೀಡೆ

ಡೆನ್ಮಾರ್ಕ್ ಓಪನ್: ಫೈನಲ್ ನಲ್ಲಿ ಮುಗ್ಗರಿಸಿದ ಸೈನಾಗೆ ಬೆಳ್ಳಿ

ಒಡೆನ್ಸ್ ನಲ್ಲಿ ನಡೆದ ಡೆನ್ಮಾರ್ಕ್ ಓಪನ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಮುಗ್ಗರಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಕೋಪನ್ ಹಗೆನ್: ಒಡೆನ್ಸ್ ನಲ್ಲಿ ನಡೆದ ಡೆನ್ಮಾರ್ಕ್ ಓಪನ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಮುಗ್ಗರಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಭಾನುವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್ ವಿಶ್ವದ ನಂ.1 ಆಟಗಾರ್ತಿ ತೈ ಝು ಯಿಂಗ್ ವಿರುದ್ಧ 13-21, 21-13, 6-21 ನೇರ ಸೆಟ್ ಗಳ ಅಂತರದಲ್ಲಿ ಸೋಲುಕಂಡರು.
 ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಜಯಿಸಿದ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸೂಪರ್ ಸಿರೀಸ್ ಫೈನಲ್ ನಲ್ಲಿ ಆಡಿದ ಸೈನಾ, ತೈವಾನ್ ಆಟಗಾರ್ತಿ ವಿರುದ್ಧ ಸೋಲಿನ ಸರಪಳಿ ಕಳಚಿಕೊಳ್ಳಲು ಮತ್ತೊಮ್ಮೆ ವಿಫಲರಾದರು. ಹಾಲಿ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಸೇರಿದಂತೆ ಯಿಂಗ್ ಸೈನಾ ವಿರುದ್ಧ ಆಡಿರುವ 18 ಪಂದ್ಯಗಳಲ್ಲಿ 13ನೇ ಗೆಲುವು ದಾಖಲಿಸಿದ್ದಾರೆ. ಭಾರತದ ಶಟ್ಲರ್ ಸೈನಾ 2013ರಲ್ಲಿ ಕೊನೆಯ ಬಾರಿ ತೈ ಝು ಯಿಂಗ್ ಅವರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ