ಪಿವಿ ಸಿಂಧು 
ಕ್ರೀಡೆ

ಮಲೇಷಿಯಾ ಓಪನ್: ಪಿವಿ ಸಿಂಧುಗೆ ಸೋಲು, ಕ್ವಾರ್ಟರ್ ಫೈನಲ್‌ ಪ್ರವೇಶಿಸಿದ ಶ್ರೀಕಾಂತ್

ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಾರತದ ಭರವಸೆಯ ಆಟಗಾರ್ತಿ ಪಿವಿ ಸಿಂಧು ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಹೊರನಡೆದಿದ್ದಾರೆ.

ಕೌಲಾಲಾಂಪುರ್: ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಾರತದ ಭರವಸೆಯ ಆಟಗಾರ್ತಿ ಪಿವಿ ಸಿಂಧು ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಹೊರನಡೆದಿದ್ದಾರೆ. ಇದೇ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಕಿಡಂಬಿ ಶ್ರೀಕಾಂತ್ ಜಯಗಳಿಸಿ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಸಿಂಧು ದಕ್ಷಿಣ ಕೊರಿಯಾ ಆಟಗಾರ್ತಿ ಸಂಗ್ ಜಿ ಹ್ಯೂನ್ ವಿರುದ್ಧ  18-21, 7-21 ನೇರ ಸೆಟ್ ಗಳಿಂದ ಸೋಲು ಅನುಭವಿಸಿದ್ದಾರೆ. 
ಪುರುಷರ ವಿಭಾಗದಲ್ಲಿ ಕಿಡಂಬಿ ಶ್ರೀಕಾಂತ್ ಥಾಯ್ ಲ್ಯಾಂಡಿನ ಖೋಸಿತ್ ಫೆಟ್ ಪ್ರದಬ್ ಅವರನ್ನು ಮಣಿಸಿ ಎಂಟರ ಘಟ್ಟಕ್ಕೆ ಪ್ರವೇಶಿಸಿದರು. ಶ್ರೀಕಾಂತ್ 21-11, 21-15 ಸೆಟ್ ಗಳಿಂದ ಜಯಿಸಿ ಮುಂದಿನ ಸುತ್ತಿಗೆ ಪ್ರವೇಶ ಗಿಟ್ಟಿಸಿದ್ದಾರೆ.
ಶ್ರೀಕಾಂತ್ ಶುಕ್ರವಾರ ಕ್ವಾರ್ಟರ್ ಫೈನಲ್ಸ್ ನಲ್ಲಿ ಚೀನಾದ ಚೆನ್ ಲಾಂಗ್ ಅವರನ್ನು ಎದುರಿಸಲಿದ್ದಾರೆ. 
ಇದಕ್ಕೆ ಮುನ್ನ ಬುಧವಾರದ ಪಂದ್ಯದಲ್ಲಿ ಭಾರತದ ಇನ್ನೋರ್ವ ಆಟಗಾರ್ತಿ ಸೈನಾ ನೆಹ್ವಾಲ್ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ