ಕ್ರೀಡೆ

ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಗೀತಿಕಾ ಜಾಖರ್ ಗೆ ಚಿನ್ನದ ಗರಿ

Srinivasamurthy VN

ಚಂಡೀಗಢ: ಹರಿಯಾಣದ ಉಪ ಪೊಲೀಸ್‌ ಅಧೀಕ್ಷಕಿ ಗೀತಿಕಾ ಜಾಖರ್ ಅವರು ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದು, ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಹರಿಯಾಣದ ಉಪ ಪೊಲೀಸ್‌ ಅಧೀಕ್ಷಕಿ (ಡಿಎಸ್‌ಪಿ) ಗೀತಿಕಾ ಜಾಖರ್ ಅವರು ಇತ್ತೀಚೆಗೆ ಚೀನಾದ ಚೆಂಗ್ಡುನಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದುಕೊಟ್ಟುಕೊಟ್ಟಿದ್ದಾರೆ.

ಗೀತಿಕಾ ಜಾಖರ್ ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯನ್ ಕ್ರೀಡಾಕೂಟ, ಕಾಮನ್ವೆಲ್ತ್ ಕ್ರೀಡಾಕೂಟ ಮತ್ತು ವಿಶ್ವ ಚಾಂಪಿಯನ್‌ಶಿಪ್ ಸೇರಿದಂತೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಅವರು ಪದಕಗಳನ್ನು ಗೆದ್ದಿದ್ದಾರೆ. ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಅನೇಕ ದೇಶಗಳ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹರಿಯಾಣ ಪೊಲೀಸ್ ಸಿಬ್ಬಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಆದರೆ. ಅಲ್ಲದೆ, ದೇಶದ ಪದಕಗಳ ಪಟ್ಟಿಯಲ್ಲೂ ತಮ್ಮ ಸ್ಥಾನ ಹೆಚ್ಚಿಸಿಕೊಂಡಿದ್ದಾರೆ ಪೊಲೀಸ್ ಇಲಾಖೆ ವಕ್ತಾರರು ತಿಳಿಸಿದ್ದಾರೆ.

SCROLL FOR NEXT