ಕ್ರೀಡೆ

ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ನಗದು ಬಹುಮಾನ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

Srinivasamurthy VN

ಬೆಂಗಳೂರು: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಂಗಾರದ ‌ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ರಾಜ್ಯ ಸರ್ಕಾರ ಐದು ಲಕ್ಷ ರೂ ಬಹುಮಾನ ನೀಡಲಿದೆ ಎಂದು ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿ ಪ್ರಕಟಿಸಿದರು.

ತೆಲಂಗಾಣ ರಾಜ್ಯಪಾಲ ಇಎಸ್‍ಎಲ್‍ ನರಸಿಂಹನ್ ಅವರು ಸಿಂಧು ಅವರು ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್‍ನಲ್ಲಿ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರ ಐತಿಹಾಸಿಕ ಸಾಧನೆಗೆ ದೇಶ ಹೆಮ್ಮೆ ಪಡುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ವಿಶ್ವ ವಿಜೇತೆ ಪಿವಿ ಸಿಂಧುಗೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ 20 ಲಕ್ಷ ರೂ ಘೋಷಣೆ ಮಾಡಿದ್ದು, ಸಾಯಿ ಪ್ರಣೀತ್ ಗೆ ಐದು ಲಕ್ಷ ರೂ ಘೋಷಣೆ ಮಾಡಿದೆ. 

ಇನ್ನು ಕರ್ನಾಟಕದ ಬಹುತೇಕ ಪ್ರದೇಶಗಳು ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ತಮ್ಮ  ಅಸ್ಥಿತ್ವವನ್ನೇ ಕಳೆದುಕೊಂಡಿರುವ ಪ್ರವಾಹ ಪೀಡಿತ ಸಂತ್ರಸ್ಥರು ನೆರವಿಗಾಗಿ ಅಂಗಲಾಚುತ್ತಿರುವ ಈ ಸಂದರ್ಭದಲ್ಲಿ ಸಿಎಂ ಬಿಎಸ್ ವೈ ಪಿವಿ ಸಿಂಧುಗೆ ನಗದು ಬಹುಮಾನ ಘೋಷಣೆ ಮಾಡಿರುವುದು ಹಲವು ಚರ್ಚೆ ಹುಟ್ಟುಹಾಕಿದೆ.
 

SCROLL FOR NEXT