ಕ್ರೀಡೆ

2026 ಅಥವಾ 2030ರ ಕಾಮನ್‌ವೆಲ್ತ್‌ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ

Vishwanath S

ನವದೆಹಲಿ: ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಹಾಗೂ 2022ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.

ಸೋಮವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ವೇಳೆ ಭಾರತ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಮನವಿ ಮೇರೆಗೆ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಭಾರತ ತಂಡ ಭಾಗವಹಿಸದ ಕಾರಣ ಪ್ರತ್ಯೇಕವಾಗಿ ಕಾಮನ್ ವೆಲ್ತ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ.

ನವದೆಹಲಿಯ ಒಲಿಂಪಿಕ್ ಭವನದಲ್ಲಿ ಇಂದು ಒಲಿಂಪಿಕ್ಸ್ ಅಸೋಸಿಯೇಷನ್ ನ ವಾರ್ಷಿಕ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು. ಆಡಳಿತ ವಿಷಯಗಳು ಹಾಗೂ ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ವಿಚಾರದ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ಐಒಎ ಟ್ವೀಟ್ ಮಾಡಿದೆ.

SCROLL FOR NEXT