ಹಿಮಾದಾಸ್ 
ಕ್ರೀಡೆ

ಯುನಿಸೆಫ್‌ನ ಮೊದಲ ಯುವ ರಾಯಭಾರಿಯಾಗಿ ಹಿಮಾದಾಸ್ ನೇಮಕ

ಏಷ್ಯನ್ ಕ್ರೀಡಾ ಕೂಟದ ಚಿನ್ನದ ಪದಕ ವಿಜೇತೆ ಹಿಮಾದಾಸ್ ಅವರನ್ನು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್)ಯ ಭಾರತದ ಮೊದಲ...

ನವದೆಹಲಿ: ಏಷ್ಯನ್ ಕ್ರೀಡಾ ಕೂಟದ ಚಿನ್ನದ ಪದಕ ವಿಜೇತೆ ಹಿಮಾದಾಸ್ ಅವರನ್ನು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್)ಯ ಭಾರತದ ಮೊದಲ ಯುವ ರಾಯಭಾರಿಯಾಗಿ ನೇಮಿಸಲಾಗಿದೆ. 
ಯುನಿಸೆಫ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇದನ್ನು ಪ್ರಕಟಿಸಿದೆ.
'ಹಿಮಾದಾಸ್‌ಗೆ ಅಭಿನಂದನೆಗಳು ವಿಶ್ವ ಮಕ್ಕಳ ದಿನದ ಭಾಗವಾಗಿ ಏಷ್ಯನ್ ಕ್ರೀಡಾಕೂಟದ ಪದಕ ವಿಜೇತೆ ಹಿಮಾದಾಸ್‌ ಭಾರತದ ಮೊದಲ ಯುವ ರಾಯಭಾರಿಯಾಗಿದ್ದಾರೆ.' ಎಂದು ಯುನಿಸೆಫ್‌ ಟ್ವೀಟ್‌ ಮಾಡಿದೆ. 
ಹಿಮಾದಾಸ್‌ ಅವರು ರಾಯಭಾರಿ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಈ ಮೂಲಕ ಮಕ್ಕಳಿಗೆ ಸ್ಫೂರ್ತಿಯಾಗಲಿದ್ದಾರೆ ಎಂದು ವಿಶ್ವಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ. 
'ಯುನಿಸೆಫ್ ಭಾರತದ ಯುವ ರಾಯಭಾರಿಯಾಗಿ ಆಯ್ಕೆಯಾಗಿರುವುದಕ್ಕೆ ನನಗೆ ಹೆಮ್ಮೆಯೆನಿಸುತ್ತದೆ. ಮಕ್ಕಳು ತಮ್ಮ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಅವರನ್ನು ಉತ್ತೇಜಿಸಲು ಇದು ತಮಗೆ ಅತ್ಯುತ್ತಮ ಅವಕಾಶ ಎಂದು ನಾನು ಭಾವಿಸುತ್ತೇನೆ' ಎಂದು ಹಿಮಾ ದಾಸ್ ಹೇಳಿದ್ದಾರೆ.
2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ 4 x 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಹಿಮಾದಾಸ್‌ ಚಿನ್ನದ ಪದಕ ಗೆದ್ದಿದ್ದರು.
ಮಹಿಳೆಯರ 400 ಮೀ ಓಟದ ಸ್ಪರ್ಧೆಯಲ್ಲಿ 50.59 ಸೆಕೆಂಡುಗಳಲ್ಲಿ ಬೆಳ್ಳಿ ಪದಕವನ್ನೂ ಅವರು ತಮ್ಮದಾಗಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT