ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿ: ರೋಜರ್ ಫೆಡರರ್ ಮಣಿಸಿ ಫೈನಲ್ ಪ್ರವೇಶಿಸಿದ ರಾಫೆಲ್ ನಡಾಲ್
ಇಂದು ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ರೋಜರ್ ಫೆಡರರ್ ಅವರನ್ನು ಸೋಲಿಸಿದ ರಾಫೆಲ್ ನಡಾಲ್ ಫೈನಲ್ ಪ್ರವೇಶಿಸಿದ್ದಾರೆ.
ಫ್ಯಾರಿಸ್ : ಇಂದು ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ರೋಜರ್ ಫೆಡರರ್ ಅವರನ್ನು ಸೋಲಿಸಿದ ರಾಫೆಲ್ ನಡಾಲ್ ಫೈನಲ್ ಪ್ರವೇಶಿಸಿದ್ದಾರೆ.
ಫಿಲಿಪ್ಪೆ ಚಾರ್ಟಿಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 33 ವರ್ಷದ ರಾಫೆಲ್ ನಡಾಲ್ ಅದ್ಬುತ ಪ್ರದರ್ಶನ ನೀಡಿದರು. ಕೊನೆಯಲ್ಲಿ 6-3, 6-4, 6-2 ಅಂತರದಿಂದ ರೋಜರ್ ಫೆಡರರ್ ಅವರನ್ನು ಸೋಲಿಗೆ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಕ್ರಮಾಂಕದ ಆಟಗಾರ ನೊವಾಕ್ ಜಾಕೊವಿಕ್ ಅಥವಾ ಆಸ್ಟ್ರೇಲಿಯಾದ ಡಾಮಿನಿಕ್ ಥೀಮ್ ವಿರುದ್ಧ ಪ್ರಶಸ್ತಿಗೆ ರಾಫೆಲ್ ನಡಾಲ್ ಸೆಣಸಲಿದ್ದಾರೆ.ಇದು ನಡಾಲ್ ಅವರ 12 ನೇ ಚಾಂಫಿಯನ್ ಶಿಫ್ ಪಂದ್ಯವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.