ನಿಶಾದ್ ಕುಮಾರ್ 
ಕ್ರೀಡೆ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಭಾರತಕ್ಕೆ 9ನೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಕೋಟಾ, ನಿಶಾದ್ ಕುಮಾರ್ ಗೆ ಕಂಚು

ದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ದುಬೈ: ದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ 9ನೇ ಅಥ್ಲಿಟ್ ನಿಶಾದ್ ಕುಮಾರ್ ಆಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್‍ಶಿಪ್ ನಲ್ಲಿ ಭಾರತಕ್ಕೆ ಮೂರು ಕಂಚಿನ ಪದಕಗಳು ಸೇರಿ ಒಟ್ಟು ಆರು ಪದಕಗಳು ಬಂದಿವೆ. ನಿಶಾದ್ ಮೊದಲ ಬಾರಿ 1.75 ಮೀ. ಹಾಗೂ ನಂತರದ ಪ್ರಯತ್ನದಲ್ಲಿ 1.97 ಮೀ ಜಿಗಿದಿದ್ದರು.

ಅಮೆರಿಕದ ರಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಹಾಗೂ ವಿಶ್ವ ದಾಖಲೆಗಾರ ರೋಡ್ರಿಕ್ ಟೌನ್‍ಶೆಂಡ್ ರೋಬರ್ಟ್ ಅವರು 2.03 ಮೀ ಜಿಗಿಯುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಚೆನ್ ಬೆಳ್ಳಿ ಪದಕಕ್ಕೆ ಪಡೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT