ಕೊರಿಯಾ ಮಾಸ್ಟರ್ಸ್: ಶ್ರೀಕಾಂತ್, ಸಮೀರ್ ಮುನ್ನಡೆ, ಸೌರಭ್ ವರ್ಮಾ ಔಟ್
ಕೊರಿಯಾ ಮಾಸ್ಟರ್ಸ್ನಲ್ಲಿ ಭಾರತ ಉತ್ತಮ ಪ್ರಾರಂಬವನ್ನು ಕಂಡಿದ್ದು ಬುಧವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಶಟ್ಲರ್ಗಳಾದ ಕಿಡಂಬಿ ಶ್ರೀಕಾಂತ್ ಮತ್ತು ಸಮೀರ್ ವರ್ಮಾ ಎರಡನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
ಗ್ವಾಂಗ್ಜು(ಕೊರಿಯಾ): ಕೊರಿಯಾ ಮಾಸ್ಟರ್ಸ್ನಲ್ಲಿ ಭಾರತ ಉತ್ತಮ ಪ್ರಾರಂಬವನ್ನು ಕಂಡಿದ್ದು ಬುಧವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಶಟ್ಲರ್ಗಳಾದ ಕಿಡಂಬಿ ಶ್ರೀಕಾಂತ್ ಮತ್ತು ಸಮೀರ್ ವರ್ಮಾ ಎರಡನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
37 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಆರನೇ ಶ್ರೇಯಾಂಕದ ಶ್ರೀಕಾಂತ್ 21-18 21-17 ಸೆಟ್ ಗಳಿಂದ ಹಾಂಕಾಂಗ್ ನ ವಾಂಗ್ ವಿಂಗ್ ಕಿ ವಿನ್ಸೆಂಟ್ ಅವರನ್ನು ಸೋಲಿಸಿದ್ದರೆ ಜಪಾನ್ನ ಕಝುಮಾಸಾ ಸಾಕಿ ಕಣದಿಂದ ಹಿಂದೆ ಸರಿದ ಪರಿಣಾಮ ಸಮೀರ್ ವರ್ಮಾ ಸಹ ದ್ವಿತೀಯ ಸುತ್ತು ಪ್ರವೇಶಿಸಿದರು.
ಇನ್ನೊಂದೆಡೆ ಮೊದಲ ಪಂದ್ಯದಲ್ಲಿ ವಿಜೇತರಾಗಿದ್ದ ಸೌರಭ್ ವರ್ಮಾ ಎರಡನೇ ಆಟದಲ್ಲಿ ಸ್ಥಳೀಯರಾದ ಕಿಮ್ ದೊಂಗ್ಹುನ್ ವಿರುದ್ಧ 21-13, 12-21, 13-21ರಿಂದ ಪರಾಜಿತರಾಗಿ ಪಂದ್ಯಾವಳಿಯಿಂದ ಹೊರಬಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.