ಸಾಂದರ್ಭಿಕ ಚಿತ್ರ 
ಕ್ರೀಡೆ

ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಭಾರತ- ಬಾಂಗ್ಲಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ ನಾಳೆ ಇಲ್ಲಿನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಂದು ದಿನದ ಮುಂಚಿತವಾಗಿಯೇ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ. 

ಕೊಲ್ಕತಾ:  ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ ನಾಳೆ ಇಲ್ಲಿನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಂದು ದಿನದ ಮುಂಚಿತವಾಗಿಯೇ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ. 

2011ರ ಬಳಿಕ ಇದೇ ಮೊದಲ ಬಾರಿ ಕೊಲ್ಕತಾ ನಗರದಲ್ಲಿ  ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿರು ವುದರಿಂದ ಫುಟ್ಬಾಲ್ ಅಭಿಮಾನಿಗಳ ಪಾಲಿಗೆ ನಾಳೆ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ. 

2011ರಲ್ಲಿ ಭಾರತ ತಂಡ 3-2 ಅಂತರದಲ್ಲಿ ಮಲೇಷ್ಯಾ ತಂಡವನ್ನು ಸೌಹಾರ್ಧಯುತ ಪಂದ್ಯದಲ್ಲಿ ಮಣಿಸಿತ್ತು. ವಿವೇಕಾನಂದ ಕ್ರೀಡಾಂಗಣದಲ್ಲಿ  65,000 ಮಂದಿ ಪಂದ್ಯ ವೀಕ್ಷಿಸಬಹುದು. ಒಂದು ದಿನ ಮುಂಚಿತವಾಗಿಯೇ ಎಲ್ಲ ಟಿಕೆಟ್‌ಗಳು ಬಿಕರಿಯಾಗಿವೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ಮುಖ್ಯ ಕೋಚ್ ಸ್ಟಿಮ್ಯಾಕ್ ಇಗೋರ್, ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ‘ಇ’ ಗುಂಪಿನಲ್ಲಿರುವ ಬಾಂಗ್ಲಾದೇಶದ ವಿರುದ್ಧ ಭಾರತ ಫೇವರಿಟ್ ಎಂಬುದನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT