ಶಿವ ಥಾಪ 
ಕ್ರೀಡೆ

ಒಲಿಂಪಿಕ್ ಟೆಸ್ಟ್‌ ಈವೆಂಟ್: ಫೈನಲ್ ತಲುಪಿದ ಶಿವ ಥಾಪ, ಪೂಜಾ ರಾಣಿ

ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ಸ್‌ ಟೆಸ್ಟ್‌ ಈವೆಂಟ್‌ನಲ್ಲಿ ಫೈನಲ್‌ ಪ್ರವೇಶ ಮಾಡಿದ್ದಾರೆ. ಆದರೆ, ಇನ್ನುಳಿದ ಇಬ್ಬರು...

ಟೋಕಿಯೊ: ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ಸ್‌ ಟೆಸ್ಟ್‌ ಈವೆಂಟ್‌ನಲ್ಲಿ ಫೈನಲ್‌ ಪ್ರವೇಶ ಮಾಡಿದ್ದಾರೆ. ಆದರೆ, ಇನ್ನುಳಿದ ಇಬ್ಬರು ಭಾರತೀಯರು ಸೆಮಿಫೈನಲ್ಸ್‌ ನಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಬುಧವಾರ ನಡೆದ ಪುರುಷರ 63 ಕೆ.ಜಿ ವಿಭಾಗದಲ್ಲಿ ಅಂತಿಮ ನಾಲ್ಕರ ಘಟ್ಟದ ಪಂದ್ಯದಲ್ಲಿ ನಾಲ್ಕು ಬಾರಿ ಏಷ್ಯನ್ ಪದಕ ವಿಜೇತ ಶಿವ ಥಾಪ ಅವರು ಜಪಾನ್‌ನ ಡೈಸುಕ್ ನರಿಮಾಟ್ಸು ಅವರ ವಿರುದ್ಧ ಗೆದ್ದು ಪ್ರಶಸ್ತಿ ಸುತ್ತಿಗೆ ಪ್ರವೇಶ ಮಾಡಿದ್ದಾರೆ.

ಶಿವ ಥಾಪ ಅವರು ಪ್ರಸಕ್ತ ತಿಂಗಳಿನ ಆರಂಭದಲ್ಲಿ ಮೂರನೇ ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದರು.

ಇನ್ನು, ಮಹಿಳೆಯರ 75 ಕೆ.ಜಿ ವಿಭಾಗದಲ್ಲಿ ಏಷ್ಯನ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ಭಾರತದ ಪೂಜಾ ರಾಣಿ ಅವರು ಬ್ರೆಜಿಲ್ ನ ಬೀಟ್ರಿಝ್ ಸೋರ್ಸ್ ಅವರ ವಿರುದ್ಧ ಸರ್ವಾನುಮತದ ಆಧಾರದ ಮೇಲೆ ಫೈನಲ್‌ಗೆ ಲಗ್ಗೆ ಇಟ್ಟರು. ಪೂಜಾ ರಾಣಿ ಅವರು ವರ್ಷದ ಆರಂಭದಲ್ಲಿ ಏಷ್ಯನ್ ಚಾಂಪಿಯನ್‌ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!