ಶಿವ ಥಾಪ 
ಕ್ರೀಡೆ

ಒಲಿಂಪಿಕ್ ಟೆಸ್ಟ್‌ ಈವೆಂಟ್: ಶಿವ ಥಾಪ, ಪೂಜಾ ರಾಣಿಗೆ ಚಿನ್ನ, ಆಶಿಶ್‍ಗೆ ಬೆಳ್ಳಿ

ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ ಟೆಸ್ಟ್ ಈವೆಂಟ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡರೆ. ಆಶಿಶ್ (69 ಕೆ.ಜಿ) ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಟೋಕಿಯೊ: ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ ಟೆಸ್ಟ್ ಈವೆಂಟ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡರೆ. ಆಶಿಶ್ (69 ಕೆ.ಜಿ) ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಗುರವಾರ ಬೆಳಗ್ಗೆ ನಡೆದ ಪುರುಷರ 63 ಕೆ.ಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಾಲ್ಕು ಬಾರಿ ಏಷ್ಯನ್ ಪದಕ ವಿಜೇತ ಶಿವ ಥಾಪ ಅವರು ಕಝಕಿಸ್ತಾನದ ರಾಷ್ಟ್ರೀಯ ಚಾಂಪಿಯನ್ ಹಾಗೂ ಏಷ್ಯನ್ ಕಂಚಿನ ಪದಕ ವಿಜೇತ ಸನಾಟಲಿ ಟೊಲ್ಟ್‍ಯೆವ್ ವಿರುದ್ಧ 5-0 ಅಂತರದಲ್ಲಿ ಗೆದ್ದು ಸ್ವರ್ಣ ಪದಕ ಮುಡಿಗೇರಿಸಿಕೊಂಡರು.

ಶಿವ ಥಾಪ ರಾಷ್ಟ್ರೀಯ ಚಾಂಪಿಯನ್ ಹಾಗೂ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ವಿಜೇತರಾಗಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಪೂಜಾ ರಾಣಿ ಅವರು ಮಹಿಳೆಯರ 75 ಕೆಜೆ ವಿಭಾಗದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಕೈಟ್ಲಿನ್ ಪಾರ್ಕರ್ ಅವರನ್ನು ಸೋಲಿಸುವ ಮೂಲಕ ಚಿನ್ನದ ನಗೆ ಬೀರಿದರು.

ಇನ್ನು ಆಶಿಶ್ ಅವರು 69 ಕೆಜಿ ವಿಭಾಗದ ಪುರುಷರ ಫೈನಲ್ ಹಣಾಹಣಿಯಲ್ಲಿ ಜಪಾನ್ ನ ಸೆವೋನ್ ಒಕಾಜಾವ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿ ಪದಕಕ್ಕೆ  ತೃಪ್ತಿಪಟ್ಟುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT