ಸೈನಾ ನೆಹ್ವಾಲ್ 
ಕ್ರೀಡೆ

ಮೊದಲ ಸುತ್ತಿನಲ್ಲೇ ನಿರಾಸೆ: ಚೀನಾ ಓಪನ್‌ನಿಂದ ಸೈನಾ ನೆಹ್ವಾಲ್‌ ಔಟ್‌

ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಅವರು ಬಿಡಬ್ಲ್ಯುಎಫ್ ಚೀನಾ ಓಪನ್‌ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ನವದೆಹಲಿ: ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಅವರು ಬಿಡಬ್ಲ್ಯುಎಫ್ ಚೀನಾ ಓಪನ್‌ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಬುಧವಾರ ಬೆಳಗ್ಗೆ ನಡೆದ ಮಹಿಳೆಯರ ಸಿಂಗಲ್ಸ್‌ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರು ಥಾಯ್ಲೆಂಡ್‌ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ 10-21, 17-21 ಅಂತರದಲ್ಲಿ ಸೋಲು ಅನುಭವಿಸಿದರು.

ಚೀನಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಸೈನಾ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷೆ ಮಾಡಲಾಗಿತ್ತು. ಆದರೆ ಲಂಡನ್ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ವಿರುದ್ಧ ಎದುರಾಳಿ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಪರಿಣಾಮ 44 ನಿಮಿಷಗಳಲ್ಲೇ ಪಂದ್ಯವನ್ನು ವಶಪಡಿಸಿಕೊಂಡರು. 

ಇಂಡೇನೇಷ್ಯಾ ಓಪನ್ ಗೆಲ್ಲುವ ಮೂಲಕ ಪ್ರಸಕ್ತ ಸಾಲನ್ನು ಆರಂಭಿಸಿರುವ ಸೈನಾಗೆ ತದಾ ಬಳಿಕ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಪ್ರಸ್ತುತ ಭಾರತದ ಹೆಮ್ಮೆಯ ಪಿವಿ ಸಿಂಧೂ ಮೇಲೆ ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ಇತ್ತೀಚೆಗಷ್ಟೇ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?