ಸೋಫಿಯಾ ಕೆನಿನ್ 
ಕ್ರೀಡೆ

ಸೋಫಿಯಾ ಕೆನಿನ್‌ಗೆ ಚೊಚ್ಚಲ ಆಸ್ಟ್ರೇಲಿಯಾ ಓಪನ್ ಗರಿ

ಪ್ರಸಕ್ತ ವರ್ಷದ ಮೊದಲ ಗ್ರ್ಯಾಂಡ್‌ ಸ್ಲಾಮ್‌  ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಅಮೆರಿಕದ 21ರ ಯುವ ಪ್ರತಿಭೆ ಸೋಫಿಯಾ ಕೆನಿನ್ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ

ಮೆಲ್ಬರ್ನ್ : ಪ್ರಸಕ್ತ ವರ್ಷದ ಮೊದಲ ಗ್ರ್ಯಾಂಡ್‌ ಸ್ಲಾಮ್‌  ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಅಮೆರಿಕದ 21ರ ಯುವ ಪ್ರತಿಭೆ ಸೋಫಿಯಾ ಕೆನಿನ್ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ

ಇಲ್ಲಿನ ರಾಡ್ ಲೇವರ್ ಅರೆನಾದಲ್ಲಿ ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ 14ನೇ ಶ್ರೇಯಾಂಕಿತೆ ಸೋಫಿಯಾ ಎರಡು ಗಂಟೆಗಳ ಕಾಲ ನಡೆದ ದೀರ್ಘ ಕಾಳಗದಲ್ಲಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಗಾರ್ಬಿನಿಯಾ ಮುಗುರುಜ ಅವರನ್ನು 4-6, 6-2, 6-2 ಅಂತರದಲ್ಲಿ ಮಣಿಸಿ ಆಸ್ಟ್ರೇಲಿಯಾ ಓಪನ್ ತನ್ನದಾಗಿಸಿಕೊಂಡರು

ಅಮೆರಿಕದ ಯುವ ಪ್ರತಿಭೆ ಇದಕ್ಕೂ ಮುನ್ನ ಫ್ರೆಂಚ್  ಓಪನ್ ಟೂರ್ನಿಯಲ್ಲಿ ನಾಲ್ಕನೇ ಸುತ್ತು (2019ರಲ್ಲಿ) ಪ್ರವೇಶಿಸಿರುವುದು ಅವರ ಶ್ರೇಷ್ಠ ಪ್ರದರ್ಶನವಾಗಿತ್ತು

 ಇದೀಗ ಚೊಚ್ಚಲ ಗ್ರ್ಯಾನ್ ಸ್ಲ್ಯಾಮ್ ಮುಡಿಗೇರಿಸಿಕೊಂಡಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ಹಾಲಿ ನಂ.1 ಆಟಗಾರ್ತಿ ಆಷ್ಲೇ ಬಾರ್ಟಿಗೆ ಸೋಲುಣಿಸಿ ಪ್ರಶಸ್ತಿ ಸುತ್ತು ತಲುಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT