ಸಾನಿಯಾ ಮಿರ್ಜಾ 
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಗಾಯದಿಂದ ಬಳಲಿದ ಸಾನಿಯಾ ಮಿರ್ಜಾ ಟೂರ್ನಿಯಿಂದ ಹೊರಕ್ಕೆ

ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಟ್ಟಿರುವ ಸಾನಿಯಾ ಮಿರ್ಜಾ ಅವರು ಆರಂಭದಲ್ಲೇ ನಿರಾಸೆ ಅನುಭವಿಸಿದ್ದಾರೆ.

ಮೆಲ್ಬೊರ್ನ್: ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಟ್ಟಿರುವ ಸಾನಿಯಾ ಮಿರ್ಜಾ ಅವರು ಆರಂಭದಲ್ಲೇ ನಿರಾಸೆ ಅನುಭವಿಸಿದ್ದಾರೆ.

ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ ಸ್ಲ್ಯಾಮ್ ಟೂರ್ನಿಯಲ್ಲಿ ಸಾನಿಯಾ ಮಿರ್ಜಾ ಗಾಯದ ಸಮಸ್ಯೆಯಿಂದ ಹೊರ ನಡೆದಿದ್ದಾರೆ.

ಮಹಿಳಾ ಡಬಲ್ಸ್ ಪಂದ್ಯದಲ್ಲಿ ಕಳೆದ ವಾರವಷ್ಟೇ ಸಾನಿಯಾ ಹಾಗೂ ಉಕ್ರೇನ್ ನ ನಾದಿಯಾ ಕಿಚೇನೊಕ್ ಜೋಡಿ ಡಬ್ಲ್ಯುಟಿ ಇಂಟರ್ ನ್ಯಾಷನಲ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಜೋಡಿ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಟೂರ್ನಿಯಲ್ಲಿ ಬುಧವಾರ ಗೆಲುವಿನ ಅಭಿಯಾನ ಆರಂಭಿಸುವ ಕನಸಿನೊಂದಿಗೆ ಕಣಕ್ಕೆ ಇಳಿಯಿತು. ಆದರೆ ಚೀನಾದ ಶಿಂಯುಆನ್ ಹಾನ್ ಹಾಗೂ ಲಿನ್ ಜು ಅವರ ವಿರುದ್ಧದ ಪಂದ್ಯದಲ್ಲಿ ಅಂಕಗಳಿಕೆಯಲ್ಲಿ ಹಿನ್ನಡೆ ಅನುಭವಿಸಿತು.

ಸಾನಿಯಾ ಜೋಡಿ 2-6, 0-1 ರಿಂದ ಹಿನ್ನಡೆ ಅನುಭವಿಸುತ್ತಿದ್ದಾಗ ಭಾರತದ ಆಟಗಾರ್ತಿ ಗಾಯದಿಂದ ಬಳಲಿ ಮೈದಾನದಿಂದ ಹೊರ ನಡೆದರು.

ಮಿಶ್ರ ಡಬಲ್ಸ್ ನಿಂದಲೂ ಸಾನಿಯಾ ತಮ್ಮ ಹೆಸರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಇವರು ರೋಹನ್ ಬೋಪಣ್ಣ ಅವರೊಂದಿಗೆ ಅದೃಷ್ಟ ಪರೀಕ್ಷೆ ನಡೆಸುವ ಪ್ಲಾನ್ ಮಾಡಿಕೊಂಡಿದ್ದರು. ಹೀಗಾಗಿ ಲಿಯಾಂಡರ್ ಪೇಸ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel