ಸಾಂದರ್ಭಿಕ ಚಿತ್ರ 
ಕ್ರೀಡೆ

ಹಾಕಿ ಇಂಡಿಯಾ ಅಧ್ಯಕ್ಷ ಅಹಮದ್ ರಾಜೀನಾಮೆ, ನೂತನ ಅಧ್ಯಕ್ಷರಾಗಿ ನಿಂಗೊಂಬಮ್ ನೇಮಕ

ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಮುಷ್ತಾಕ್ ಅಹಮದ್ ಅವರು ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಹಿರಿಯ ಉಪಾಧ್ಯಕ್ಷ, ಮಣಿಪುರದ ಗ್ಯಾನೆಂದ್ರೊ ನಿಂಗೊಂಬಮ್ ಅವರನ್ನು ನೇಮಕ ಮಾಡಲಾಗಿದೆ.

ನವದೆಹಲಿ: ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಮುಷ್ತಾಕ್ ಅಹಮದ್ ಅವರು ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಹಿರಿಯ ಉಪಾಧ್ಯಕ್ಷ, ಮಣಿಪುರದ ಗ್ಯಾನೆಂದ್ರೊ ನಿಂಗೊಂಬಮ್ ಅವರನ್ನು ನೇಮಕ ಮಾಡಲಾಗಿದೆ.

ಅಹಮದ್ ಅವರು ಜುಲೈ 7ರಂದೇ ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಹಾಕಿ ಇಂಡಿಯಾ ಆಡಳಿತ ಮಂಡಳಿ ಇಂದು ತುರ್ತು ಸಭೆ ಕರೆದು, ಸಭೆಯಲ್ಲಿ ಗ್ಯಾನೆಂದ್ರೊ ನಿಗೊಂಬಮ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಹಮದ್ ಅವರು ರಾಷ್ಟ್ರೀಯ ಕ್ರೀಡಾ ನೀತಿಯಲ್ಲಿರುವ ಅಧ್ಯಕ್ಷೀಯ ಅಧಿಕಾರವಧಿ ನಿಯಮವನ್ನು ಅವರು ಉಲ್ಲಂಘಿಸಿದ್ದರಿಂದ, ಸ್ಥಾನ ತೊರೆಯುವಂತೆ ಕೇಂದ್ರ ಕ್ರೀಡಾ ಸಚಿವಾಲಯ ಈಚೆಗೆ ಸೂಚಿಸಿತ್ತು.

‘ಅಧ್ಯಕ್ಷ ಸ್ಥಾನಕ್ಕೆ ಅವರ ಆಯ್ಕೆಯು ನಿಯಮಬಾಹಿರವಾಗಿತ್ತು. ವಯೋಮಿತಿ ಮತ್ತು ಪದಾಧಿಕಾರಿಗಳ ಅಧಿಕಾರವಧಿಯ ನಿಯಮಗಳನ್ನು ಪಾಲಿಸಲಾಗಿರಲಿಲ್ಲ. ಆದ್ದರಿಂದ ಸರ್ಕಾರವು ಅವರಿಗೆ ಮುಂದುವರಿಯದಿರಲು ಸೂಚಿಸಿತ್ತು’ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ