ಬಲ್ಬೀರ್ ಸಿಂಗ್ ಕುಲ್ಲರ್(ಬಲಗಡೆ ಇರುವವರು) 
ಕ್ರೀಡೆ

ಹಾಕಿ ದಿಗ್ಗಜ, ಒಲಿಂಪಿಕ್ ಪದಕ ವಿಜೇತ ಬಲ್ಬೀರ್ ಸಿಂಗ್ ಕುಲ್ಲರ್ ನಿಧನ

ಹಾಕಿ ದಿಗ್ಗಜ ಹಾಗೂ 1968 ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ಬಲ್ಬೀರ್ ಸಿಂಗ್ ಕುಲ್ಲರ್(77) ಅವರು ಭಾನುವಾರ ನಿಧನರಾಗಿದ್ದಾರೆ.

ನವದೆಹಲಿ: ಹಾಕಿ ದಿಗ್ಗಜ ಹಾಗೂ 1968 ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ಬಲ್ಬೀರ್ ಸಿಂಗ್ ಕುಲ್ಲರ್(77) ಅವರು ಭಾನುವಾರ ನಿಧನರಾಗಿದ್ದಾರೆ.

ಹಾಕಿ ಇಂಡಿಯಾ ಇಂದು ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದೆ. ಅವರ ನಿಧನಕ್ಕೆ ಹಾಕಿ ಇಂಡಿಯಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಬಲ್ಬೀರ್ ಅವರ ಸಾವು ಭಾರತೀಯ ಹಾಕಿಗೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದೆ.

ಹಾಕಿ ಇಂಡಿಯಾ, ಬಲ್ಬೀರ್ ಸಿಂಗ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದೆ.

ಪಂಜಾಬ್‌ನ ಜಲಂಧರ್ ಜಿಲ್ಲೆಯ ಸನ್‌ಸರ್‌ಪುರ್ ಗ್ರಾಮದಲ್ಲಿ ಜನಿಸಿದ ಬಲ್‌ಬೀರ್‌ ಸಿಂಗ್ ಅವರು 1963ರಲ್ಲಿ ಫ್ರಾನ್ಸ್‌ನ ಲಿಯೋನ್‌ನಲ್ಲಿ ಮೊದಲ ಪಂದ್ಯ ಆಡಿದ್ದರು. ಉತ್ತಮವಾಗಿ ಆಡಿ ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡ ಬಲ್ಬೀರ್ ಸಿಂಗ್ ಅನೇಕ ದೇಶಗಳಿಗೆ ತೆರಳಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT