ಕ್ರೀಡೆ

ತೆಲಂಗಾಣ-ಆಂಧ್ರಪ್ರದೇಶ ಸರ್ಕಾರಕ್ಕೆ ತಲಾ 5 ಲಕ್ಷ ರು. ದೇಣಿಗೆ ನೀಡಿದ ಪಿ.ವಿ ಸಿಂಧು

Shilpa D

ಹೈದರಾಬಾದ್‌:  ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಹಲವು ಕ್ರೀಡಾಪಟುಗಳು ಹಾಗೂ ಸಿನಿ ತಾರೆಯರು ಕೈಜೋಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 

ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿರುವ ಭಾರತ ಅಗ್ರ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿಸಿಂಧು ಅವರು ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಎರಡೂ ಸರ್ಕಾರಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 5 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

" ಕೋವಿಡ್‌-19 ಸೋಂಕು ವಿರುದ್ಧದ ಹೋರಾಟಕ್ಕೆ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಎರಡೂ ಸರ್ಕಾರಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 5 ಲಕ್ಷ ರೂ. ಗಳನ್ನು ದೇಣಿಗೆ ನೀಡಿದ್ದೇನೆ,'' ಎಂದು ಪಿವಿ.ಸಿಂಧು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ದಕ್ಷಿಣ ಭಾರತದ ಸಿನಿಮಾ ಸೂಪರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ಅವರು ಕೊರೊನಾ ವೈರಸ್‌ ನಿಯಂತ್ರಣದ ಹೋರಾಟಕ್ಕೆ 2 ಕೋಟಿ ರೂ.ಗಳನ್ನು ನೀಡಿದ್ದಾರೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಎರಡೂ ಸರ್ಕಾರಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷರೂ. ಗಳನ್ನು ದೇಣಿಗೆ ನೀಡಿದರು. ನಂತರ, ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ಗಳನ್ನು ನೆರವು ನೀಡಿದ್ದಾರೆ.

SCROLL FOR NEXT